Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲು

---Advertisement---

 

ಸುದ್ದಿಒನ್ : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದೆ. ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಅವರನ್ನು ತುರ್ತು ಚಿಕಿತ್ಸೆಗೆ ಒಳಪಡಿಸಲಾಯಿತು. ಹಿರಿಯ ನರರೋಗ ತಜ್ಞ ಡಾ ವಿನೀತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಅಡ್ವಾಣಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ನಿಗಾದಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ. ರಾತ್ರಿ 9 ಗಂಟೆ ಸುಮಾರಿಗೆ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು.

96 ವರ್ಷದ ಭಾರತ ರತ್ನ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಒಂದು ವಾರದ ನಂತರ ಬುಧವಾರ ರಾತ್ರಿ 10.30 ಕ್ಕೆ ಮತ್ತೊಮ್ಮೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಮೂತ್ರಶಾಸ್ತ್ರ ವಿಭಾಗಕ್ಕೆ ದಾಖಲಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment