Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ನಿಧನ

---Advertisement---

ಸುದ್ದಿಒನ್, ದಾವಣಗೆರೆ, ಏಪ್ರಿಲ್. 18 :

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ಮುಖಂಡರಾಗಿದ್ದ ಸೈಯದ್ ಸೈಫುಲ್ಲಾ ಸಾಬ್ಅವರು ಶನಿವಾರ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ, ಐದು ಪುತ್ರಿಯರು, ಪುತ್ರ ಸೈಯದ್ ಖಾಲಿದ್ ಅಹ್ಮದ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸೈಫುಲ್ಲಾ ಸಾಬ್ ಮಿಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕಳೆದ 45 ವರ್ಷಗಳಿಂದ ಶಿಕ್ಷಣ, ಬ್ಯಾಂಕಿಂಗ್ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿ ವಿಶಿಷ್ಟ ಗುರುತು ಮೂಡಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಸಿದ್ದರಾಮಯ್ಯ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ ಸೇರಿದಂತೆ ಹಲವಾರು ಹಿರಿಯ ನಾಯಕರ ಆಪ್ತರಾಗಿದ್ದರು.

 

2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ವಿರುದ್ಧ ಸೋತರೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು. ನಂತರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

 

ಶೈಕ್ಷಣಿಕವಾಗಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದ ಅವರು, ದಾವಣಗೆರೆಯ ಡಿಆರ್‌ಎಂ ಕಾಲೇಜಿನಲ್ಲಿ ಬಿ.ಎಡ್ ಅಭ್ಯಾಸ ಮಾಡಿ, ಎಂ.ಎಂ. ಬಸಪ್ಪ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿದ್ದರು. ಅವರ ಅಂತ್ಯಕ್ರಿಯೆ ಏಪ್ರಿಲ್ 19ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ಪಿ.ಬಿ. ರಸ್ತೆಯ ಹಳೇ ಖಬರ್‌ಸ್ತಾನದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...