Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು..!

---Advertisement---

ಶಿವಮೊಗ್ಗ: ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರ ಮಾರಿಕಾಂಬ ದೇವಿಯ ದರ್ಶನ ಪಡೆಯುವಾಗ ಇದ್ದಕ್ಕಿದ್ದ ಹಾಗೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದವರು ಕಾಗೋಡು ತಿಮ್ಮಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

 

ಸಾಗರ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಹೀಗಾಗಿ ಮೊದಲ ಪೂಜೆಗೆ ಕಾಗೋಡು ತಿಮ್ಮಪ್ಲ ಅವರು ತೆರಳಿದ್ದರು. ತೀವ್ರ ಉಸಿರಾಟದ ಸಮಸ್ಯೆ ಎದುರಾದ ಹಿನ್ನಲೆ ಕುಸಿದು ಬಿದ್ದಿದ್ದರು. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರು ಕೂಡ ಬಹಳ ಎಚ್ಚರಿಕೆವಹಿಸಿ ಚಿಕಿತ್ಸೆ ನೀಡಿದ್ದಾರೆ. ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. ಕಾಗೋಡು ತಿಮ್ಮಪ್ಪ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅಭಿಮಾನಿಗಳು, ಬೆಂಬಲಿಗರು, ಕುಟುಂಬಸ್ಥರು ಸಹಜವಾಗಿಯೇ ಆತಂಕಗೊಂಡಿದ್ದರು.

ಮಾರಿಕಾಂಬಾ ದೇವಿಯ ಆಶೀರ್ವಾದದಿಂದ ಸದ್ಯ ಅವರು ಚೇತರಿಕೆ ಕಂಡಿದ್ದಾರೆ. ಅವರ ಆರೋಗ್ಯ ಸುಧಾರಿಸಿಕೊಳ್ಳುತ್ತಿದೆ ಎಂದು ಮೂಲಗಳಿಂದ ಮಾಹಿತಿ ಬಂದಿದೆ. ಮಾರಿಕಾಂಬಾ ಜಾತ್ರೆ ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿಯೇ ಭಕ್ತರು ಸೇರುತ್ತಾರೆ. ಜನಸಂದಣಿ ಹೆಚ್ಚಾದ ಕಾರಣ ಕಾಗೋಡು ತಿಮ್ಮಪ್ಪ ಅವರಿಗೆ ಉಸಿರಾಡುವುದಕ್ಕೆ ಕಷ್ಟವಾಗಿದೆ. ಹೀಗಾಗಿ ಪೂಜೆಗೆಂದು ನಿಂತಿದ್ದ ಸಮಯದಲ್ಲಿಯೇ ಕುಸಿದು ಬಿದ್ದಿದ್ದಾರೆ. ಜೊತೆಗೆ ಇದ್ದವರು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಕ್ಕ ಹಿನ್ನಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now