ದಾವಣಗೆರೆ: ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಮಧ್ಯೆ ಶಾಸಕ ಶಾಮನೂರು ಶಿವಶಿಂಕರ್ಪ ಅವರು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ನಿನ್ನೆ ರಾತ್ರಿ ದಾವಣಗೆರೆಯ ಹೊರವಲಯದಲ್ಲಿರುವ ರೆಸಾರ್ಟ್ ಒಂದರಲ್ಲಿ ಭೇಟಿಯಾಗಿದ್ದಾರೆ.
ಈ ರಹಸ್ಯ ಭೇಟಿಯ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇದೆ. ಸುಮಾರು 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆದಿದೆ. ಬಳಿಕ ಮಾತನಾಡಿರುವ ಬೊಮ್ಮಾಯಿ ಅವರು, ಶಾಮನೂರು ಶಿವಶಂಕರಪ್ಪ ನಮ್ಮ ಹಿರಿಯರು. ಜೊತೆಗೆ ನಮ್ಮ ದೂರದ ಸಂಬಂಧಿ ಕೂಡ ನಮ್ಮ ಮನೆಯಲ್ಲಿಯೇ ಹಲವು ಬಾರಿ ಭೇಟಿ ಮಾಡಿದ್ದೇವೆ. ಇದಕ್ಕೆ ರಾಜಕಾರಣ ಬೆರೆಸಬಾರದು ಎಂದಿದ್ದಾರೆ.
ಇನ್ನು ನಾನು ಶಿಗ್ಗಾಂವಿಯಿಂದ ಬರುವಾಗ ಊಟ ಮಾಡಲು ಹೊಟೇಲ್ ಗೆ ಹೋಗಿದ್ದೆ. ಅಲ್ಲಿಗೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಕ್ಕಳ ಹೊಸ ಸಂಬಂಧದ ಬಗ್ಗೆ ಮಾತನಾಡಲು ಬಂದಿದ್ದರು. ಈ ವೇಳೆ ನಾನು ಹತ್ತು ನಿಮಿಷ ಕೂತ್ಕೊಂಡು ಮಾತನಾಡಿದ್ದೆ. ಯಾವ ರಾಜಕೀಯದ ಬಗ್ಗೆಯೂ ಮಾತನಾಡಿಲ್ಲ. ಸಂಬಂಧವೇ ಬೇರೆ ರಾಜಕೀಯವೇ ಬೇರೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












