Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ರಾಜಕಾರಣಿ, ಮಾಜಿ ಉಪಸಭಾಪತಿ ಸಿ. ವೀರಣ್ಣ ವಿಧಿವಶ: ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

---Advertisement---

ತುಮಕೂರು.ಜುಲೈ.25: ರಾಜ್ಯ ರಾಜಕಾರಣದ ಹಿರಿಯ ಮುಖಂಡ, ಮಾಜಿ ಸಚಿವ ಹಾಗೂ ವಿಧಾನಪರಿಷತ್ ಮಾಜಿ ಉಪಸಭಾಪತಿ ಸಿ. ವೀರಣ್ಣ (89) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತಮ್ಮ ಸ್ವಗ್ರಾಮ ಬುಕ್ಕಪಟ್ಟಣದ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿ. ವೀರಣ್ಣ ಅವರು, ದಿ. ರಾಮಕೃಷ್ಣ ಹೆಗಡೆ ಮತ್ತು ದಿ. ಎಸ್.ಆರ್. ಬೊಮ್ಮಾಯಿ ಅವರ ಸಚಿವ ಸಂಪುಟಗಳಲ್ಲಿ ಸಚಿವರಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅಲ್ಲದೆ ವಿಧಾನಪರಿಷತ್ ಉಪಸಭಾಪತಿಯಾಗಿಯೂ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿದೆ.

ಸಕ್ರಿಯ ರಾಜಕೀಯದಿಂದ ನಿವೃತ್ತರಾದ ಬಳಿಕ, ಅವರು ಬುಕ್ಕಪಟ್ಟಣದ ತಮ್ಮ ನಿವಾಸದಲ್ಲೇ ಮಕ್ಕಳ ಜೊತೆ ಸರಳವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿಶ್ರಾಂತ ಜೀವನ ನಡೆಸುತ್ತಿದ್ದರು. ಅಗಲಿದ ನಾಯಕನ ಅಂತಿಮ ಸಂಸ್ಕಾರವು ಇಂದು ಸಂಜೆ 4 ಗಂಟೆಗೆ ಬುಕ್ಕಪಟ್ಟಣದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಲಿದೆ. ಅವರ ನಿಧನಕ್ಕೆ ಜಿಲ್ಲೆಯ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Join WhatsApp

Join Now

Join Telegram

Join Now