Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ : ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು, ಜುಲೈ 28:  ಅಲೆಮಾರಿ ಜನಾಂಗದವರಿಗೆ  ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ  ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ  ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಅಲೆಮಾರಿ ಜನಾಂಗಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಇವರಿಗೆ ವಿಶೇಷವಾಗಿ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಇಂದು  ಇಂದು  ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರೊಂದಿಗೆ ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಅಲೆಮಾರಿಗಳ ಸಮಸ್ಯೆಗಳು ವಿಶಿಷ್ಟವಾಗಿದ್ದು, ಒಟ್ಟು   120 ಜಾತಿಗಳಿವೆ. ಈ ಪೈಕಿ ಎಸ್.ಸಿ 51, ಎಸ್.ಟಿ 23  ಹಾಗೂ ಹಿಂದುಳಿದ ವರ್ಗದ 46 ಜಾತಿಗಳಿವೆ. ವಿವಿಧ ರಾಜ್ಯ ಮಟ್ಟದ ಸಂಘಟನೆಗಳಿದ್ದು , ಅವುಗಳನ್ನು ಒಟ್ಟು ಸೇರಿಸಿ ಸಮನ್ವಯ ಸಮಿತಿ ರಚಿಸಲಾಗಿದೆ.   ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿ  ಬದುಕುತ್ತಿರುವ, ಅಸ್ಮಿತೆ ಇಲ್ಲದ ಸಮುದಾಯಗಳಿಗೆ  ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ. ದಾಖಲೆಗಳಲ್ಲಿ ಇವರು ಇಲ್ಲದಿರುವುದರಿಂದ ಸಮಾಜದ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ಜಾತಿ ಪ್ರಮಾಣಪತ್ರ ಕೂಡ ಇವರಿಗಿಲ್ಲ. ಸರ್ಕಾರ ಕೆಲವು ಜಾತಿಗಳನ್ನು ಮಾತ್ರ ಗುರುತಿಸಿದ್ದು,  ಇವರನ್ನು ಗುರುತಿಸುವ ಔದಾರ್ಯವನ್ನು ಸರ್ಕಾರ ತೋರಬೇಕು. ಸಮಾನ ಕುಲ, ಗೋತ್ರ, ಭಾಷೆ ಇರುವ ಜಾತಿಗಳನ್ನು ಗುರುತಿಸಬೇಕಿದೆ. ತಬ್ಬಲಿ ಸಮುದಾಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಅಲೆಮಾರಿ ಸಮುದಾಯಗಳಿಗೆ ಆಯೋಗ ರಚಿಸಬೇಕು,  ಆಗಸ್ಟ್ 31 ರಂದು ರಾಷ್ಟ್ರೀಯ ಅಲೆಮಾರಿ ವಿಮುಕ್ತ ದಿನಾಚರಣೆಯಂದು ರಾಜ್ಯ ಸರ್ಕಾರ ಆಚರಿಸಬೇಕು. ಜೋಗಿ, ಪಿಚ್ಚಗುಂಟಲು ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವುಗಳನ್ನು ಸೂಕ್ತ ಜಾತಿಗೆ  ಸೇರಿಸಿ ಮೀಸಲಾತಿ ಕಲ್ಪಿಸಬೇಕು,  ಅಲೆಮಾರಿ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಸಮಿತಿಯ ಮುಖಂಡರು  ಮನವಿ ಮಾಡಿದರು.

ಹಲವು ಜಾತಿಗಳು ಬಹುನಾಮಿಗಳಾಗಿರುವುದರಿಂದ ಜಾತಿ ಪ್ರಮಾಣ ಪತ್ರ ದೊರೆಯುತ್ತಿಲ್ಲ. ಅಗೋಚರ ಸಮುದಾಯಗಳು  ಪ್ರಾತಿನಿಧ್ಯವಿಲ್ಲದೆ  ಇದ್ದಾರೆ. ಅವರಿಗೆ ಗುರುತು ಸಿಕ್ಕರೆ, ಶಿಕ್ಷಣ, ಸರ್ಕಾರದ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಮನವಿ  ಮಾಡಿದರು.

ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್,  ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ,ಹಿರಿಯ ಪತ್ರಕರ್ತ ಹಾಗೂ ಚಿಂತಕ   ಇಂದೂಧರ ಹೊನ್ನಾಪುರ, ಹಂಪಿ  ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

error: Content is protected !!