Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅರಿಶಿನಕುಂಟೆ ಫ್ಲೈಓವರ್‌ನಲ್ಲಿ ಸರಣಿ ಅಪಘಾತ: ನಾಲ್ಕು ಕಾರುಗಳ ನಡುವೆ ಡಿಕ್ಕಿ!

---Advertisement---

ನೆಲಮಂಗಲ ನಗರದ ಅರಿಶಿನಕುಂಟೆ ಫ್ಲೈಓವರ್‌ನಲ್ಲಿ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಫ್ಲೈಓವರ್ ಮೇಲೆ ಸಾಗುತ್ತಿದ್ದ ವೇಳೆ ಏಕಾಏಕಿ ಬೈಕ್ ಒಂದು ಎದುರಿಗೆ ಬಂದಿದ್ದು, ಅದನ್ನು ತಪ್ಪಿಸಲು ಯತ್ನಿಸಿದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರ ಪರಿಣಾಮವಾಗಿ ಒಂದರ ಹಿಂದೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರವಾಸ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ವಾಹನಗಳು ಈ ಅಪಘಾತದಲ್ಲಿ ಭಾಗಿಯಾಗಿದ್ದವು ಎನ್ನಲಾಗಿದೆ.

ಘಟನೆಯ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದು, ಅಪಘಾತದಿಂದ ಫ್ಲೈಓವರ್ ಮೇಲೆ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ನೆಲಮಂಗಲ ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now