Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರಣಿ ಮೊಬೈಲ್ ಹ್ಯಾಕ್ : ಜಾಗೃತಿ ವಹಿಸಲು ಸೂಚನೆ

---Advertisement---

 

ಚಿತ್ರದುರ್ಗ. ಸೆ.20: APK file  ಅಥವಾ ಅನಾಮಧೇಯ ಲಿಂಕ್‍ಗಳನ್ನು ಬಳಿಸಿ ಮೊಬೈಲ್ ಹ್ಯಾಕ್‍ಮಾಡಿ ಖಾಸಗಿ ಮಾಹಿತಿ ಸೋರಿಕೆ ಹಾಗೂ ಬ್ಯಾಂಕ್ ಖಾತೆ ಹಣ ವರ್ಗಾಯಿಸಿಕೊಂಡು ವಂಚನೆ ಮಾಡುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಜಾಗೃತಿ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.

ಸಾರ್ವಜನಿಕರು ತಮ್ಮ ಅರಿವಿಲ್ಲದೆಯೇ ಇಂತಹ ಲಿಂಕ್‍ಗಳನ್ನು ಮೊಬೈಲ್‍ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದರೇ ಕೂಡಲೆ ಎಚ್ಚೆತ್ತುಕೊಳ್ಳಬೇಕು. ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುವುದು. ಮೊಬೈಲ್ ಬಳಸದಿದ್ದರೂ ಬಿಸಿಯಾಗಿರುವುದು. ಮೊಬೈಲ್‍ನಲ್ಲಿ ಸಣ್ಣ ಪುಟ್ಟ ಕಾರ್ಯಗಳನ್ನು ಮಾಡಲು ವಿಳಂಬವಾಗುವುದು. ಕಾರಣವಿಲ್ಲದೇ ಡಾಟಾ ಖಾಲಿಯಾಗುವುದು. ಅನಪೇಕ್ಷಿತ ಸಾಧನೆಗಳು ಮೊಬೈಲ್ ಹಾಟ್‍ಸ್ಪಾಟ್‍ಗೆ ಸಂಪರ್ಕ ಪಡೆಯುವುದು. ವಿನಾಕಾರಣ ನೆಟ್‍ವರ್ಕ್ ಸಮಸ್ಯೆ ತಲೆದೊರುವುದು. ಆಪ್‍ಗಳು ಗಮನಕ್ಕೆ ಬಾರದೇ ಇನ್ಸ್ಟಾಲ್ ಹಾಗೂ ಅನ್ ಇನ್ಸ್ಟಾಲ್ ಆಗುವುದು. ವಿನಂತಿಸದೇ ಇದ್ದರೂ ಈ ಮೇಲ್‍ಗೆ ಪಾಸ್‍ವರ್ಡ್ ರಿಸೆಟ್ ಆಗಿರುವ ಕುರಿತು ಸಂದೇಶಗಳು ಬರುವುದು. ನಿಮ್ಮ ಮೊಬೈಲ್ ಸಂಖ್ಯೆಯಿಂದ ಖಾಸಗಿ ಸಂದೇಶ ಹಾಗೂ ಕರೆಗಳು ಹೊರ ಹೊಗುವುದು ಕಂಡುಬಂದರೆ ಮೊಬೈಲ್ ಹ್ಯಾಕ್ ಆಗಿರುವ ಸಂಭವ ಹೆಚ್ಚಿರುತ್ತದೆ. ಆದ್ದರಿಂದ ಇಂತಹ ಫೈಲ್ ಹಾಗೂ ಲಿಂಕ್‍ಗಳನ್ನು ತೆರೆಯುವ ಮುನ್ನ ಎಚ್ಚರದಿಂದ ಇರಬೇಕು.

 

ಮೊಬೈಲ್ ಹ್ಯಾಕ್ ಆಗಿರುವುದು ಖಚಿತವಾದರೆ ಕೂಡಲೇ  ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನು ರದ್ದು ಪಡಿಸಬೇಕು. ಪ್ಲೇ ಸ್ಟೋರ್ ನಲ್ಲಿ e-Scan CERT-In Boot Removal  ಟೂಲ್ ಡೌನ್‍ಲೋಡ್ ಮಾಡಿಕೊಂಡು ಮೊಬೈಲ್ ಸ್ಕ್ಯಾನ್ ಮಾಡಿ ಹ್ಯಾಕಿಂಗ್ ಪೈಲ್ ಹಾಗೂ ಲಿಂಕ್‍ಗಳನ್ನು ಡಿಲಿಟ್ ಮಾಡಬೇಕು. ಜಿ-ಮೇಲ್, ಫೇಸ್ ಬುಕ್ ಸೇರಿದಂತೆ ಇತರೆ ಪ್ರಮುಖ ಆಪ್ ಪಾಸ್‍ವರ್ಡ್ ಕೂಡಲೇ ಬದಲಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿ ಹಾಗೂ ದೂರು ನೀಡಲು ಹತ್ತಿರ ಪೊಲೀಸ್ ಠಾಣೆ ಹಾಗೂ ಚಿತ್ರದುರ್ಗ ಜೆ.ಸಿ.ಆರ್ 3ನೇ ಕ್ರಾಸ್‍ನಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now