Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೀಕರ ಬರಗಾಲದ ತುರ್ತು ಪರಿಸ್ಥಿತಿ : ಅಧಿಕಾರಿ ಹಾಗೂ ನೌಕರರು ಜನರೊಂದಿಗಿದ್ದು ಕೆಲಸ ಮಾಡಿ : ಡಿಸಿಎಂ ಡಾ.ಜಿ.ಪರಮೇಶ್ವರ್

---Advertisement---

ಚಿತ್ರದುರ್ಗ.ಆ.11: ರಾಜ್ಯದಲ್ಲಿ ಸೆಪ್ಟೆಂಬರ್ ವೇಳೆಗೆ ಬರಗಾಲದ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ಎದುರಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಲಿದೆ. ಹೀಗಾಗಿ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರು ಇದನ್ನು ತುರ್ತು ಪರಿಸ್ಥಿತಿ ಎಂದು ಭಾವಿಸಿ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸೂಚನೆ ನೀಡಿದರು.

ಮಂಗಳಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ವೀಡಿಯೋ ಸಂವಾದ ಕಾರ್ಯಕ್ರಮಕ್ಕೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಕಚೇರಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು.

ಸದ್ಯದ ಬರಗಾಲ ಪರಿಸ್ಥಿತಿಯನ್ನು ಹಗುರವಾಗಿ ತೆಗೆದುಕೊಳ್ಳುವ ವಿಷಯವಲ್ಲ. ಅಧಿಕಾರಿಗಳು ಜನಸಾಮಾನ್ಯರ ಬಳಿ ತೆರಳಿ ಸಮಾಧಾನಪಡಿಸಿ, ಸರ್ಕಾರ ಅವರ ಜೊತೆಗಿದೆ ಎಂಬ ವಿಶ್ವಾಸ ಮೂಡಿಸಬೇಕು. ಪ್ರತಿಯೊಬ್ಬ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲಿ ಇರಬೇಕು ಎಂದರು.

ರೈತರಿಂದ ಪ್ರೀಮಿಯಂ ಕಟ್ಟಿಸಿಕೊಳ್ಳುವ ವಿಮಾ ಕಂಪನಿಗಳು, ಬೆಳೆ ಹಾನಿಯಾದಾಗ ಸೂಕ್ತ ಪರಿಹಾರ ನೀಡುತ್ತಿಲ್ಲ. ಇಂತಹ ಕಂಪನಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆ ನಡೆಸುವ ಅಗತ್ಯವಿದೆ. ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಮಳೆಮಾಪಕ ಕೇಂದ್ರಗಳದ್ದು ಇದರಲ್ಲಿ ಅರ್ಧದಷ್ಟು ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ಹೊಸ ಉಪಕರಣ ಅಳವಡಿಸಲು ಸೂಚಿಸಲಾಗಿದ್ದೇನೆ. ಸೆಪ್ಟೆಂಬರ್‌ನಲ್ಲಿ ಬರ ಪರಿಸ್ಥಿತಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಸರ್ಕಾರವು ಸಂಪೂರ್ಣ ಸಿದ್ಧತೆಯೊಂದಿಗೆ ರೈತರ ನೆರವಿಗೆ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸರ್ಕಾರ ಪ್ರತಿ ಪಂಚಾಯತಿಯಲ್ಲಿ ಈ ಸಂಘಗಳನ್ನು ರಚಿಸಿ, ಸಾಮರಸ್ಯ ಮತ್ತು ಅನ್ಯೋನ್ಯತೆ ಬೆಳೆಸಲು ಸರ್ಕಾರ ವರ್ಷಕ್ಕೆ 10 ಲಕ್ಷ ರೂಪಾಯಿ ಅನುದಾನ ನೀಡಲಿದೆ. ಅಧಿಕಾರಿಗಳು ಈ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

*ಜನರ ಅಹವಾಲು ಆಲಿಕೆಗೆ ಪ್ರಜಾಸೇವಾ ಇಲಾಖೆ*

ರಾಜ್ಯದಲ್ಲಿ ಜನರ ಅಹವಾಲುಗಳನ್ನು ನೇರವಾಗಿ ಆಲಿಸಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ‘ಪ್ರಜಾಸೇವೆ ಇಲಾಖೆ ಆರಂಭಿಸಿದ್ದಾರೆ. ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.

ಸರ್ಕಾರವು ‘ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶ ಹೊಂದಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ಹಿರಿಯ ಅಧಿಕಾರಿಗಳನ್ನು ನೇಮಿಸಿ, ಜನರ ಕುಂದುಕೊರತೆಗಳನ್ನು ಆಲಿಸಲಾಗುವುದು.

​ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳು ಜಾರಿಯಲ್ಲಿದ್ದರೂ, ಗ್ರಾಮೀಣ ಭಾಗದಲ್ಲಿ ವಸತಿ, ನಿವೇಶನ ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸಮಸ್ಯೆಗಳು ಇಂದಿಗೂ ಸವಾಲಾಗಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸದಿದ್ದಾಗ ಜನರು ಗೊಂದಲಕ್ಕೊಳಗಾಗುತ್ತಿದ್ದರು. ಇಂತಹ ಸಮಸ್ಯೆಗಳಿಗೆ ಪರಿಹಾರ ನೀಡಲು ‘ಪ್ರಜಾಸೇವೆ’ ಇಲಾಖೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ 244 ತಾಲೂಕುಗಳ ಪೈಕಿ 140 ತಾಲೂಕುಗಳು ತೀವ್ರ ಬರಪೀಡಿತವಾಗಿದ್ದು, ನೂರಾರು ವರ್ಷಗಳಲ್ಲೇ ಕಾಣದಂತಹ ಸವಾಲು ಎದುರಾಗಿದೆ. ಕಡಲೇಕಾಯಿ ಹಾಗೂ ಅಡಿಕೆ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ತೀವ್ರವಾಗಿದೆ. ಪಕ್ಕದ ರಾಜ್ಯಗಳಲ್ಲೂ ಮೇವಿನ ಕೊರತೆ ಇರುವ ಹಿನ್ನೆಲೆಯಲ್ಲಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ಬೀಜದ ಕಿಟ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಳೆದ ಮೇವನ್ನು ಸರ್ಕಾರವೇ ಖರೀದಿಸುವ ಭರವಸೆಯನ್ನೂ ನೀಡಲಾಗಿದೆ ಎಂದರು.

​ಬರ ನಿರ್ವಹಣೆಯು ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಬೆಳಗಾವಿ, ಕಲ್ಬುರ್ಗಿ ಮತ್ತು ಬೆಂಗಳೂರು ವಿಭಾಗಗಳ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಸಾರ್ವಜನಿಕರಿಗೆ ಧೈರ್ಯ ತುಂಬಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಬಾಗಲಕೋಟೆ, ವಿಜಯಪುರ, ಕೊಪ್ಪಳ ಹಾಗೂ ಹಲವು ಭಾಗಗಳಲ್ಲಿ ಜನ ಗುಳೆ ಹೋಗುವುದು ಹೆಚ್ಚಾಗಿದೆ. ರೈತರಿಗೆ ಗ್ರಾಮಗಳಲ್ಲೇ ಉದ್ಯೋಗ ಕಲ್ಪಿಸಲು ‘ವಿಬಿ ಜಿ ರಾಮ್ ಜಿ’ ಯೋಜನೆಯಡಿ ಹೆಚ್ಚಿನ ಕೆಲಸ ನೀಡಲಾಗುತ್ತಿದೆ. ಕೇಂದ್ರದಿಂದ ಅನುದಾನ ಬರದಿದ್ದರೂ, ರಾಜ್ಯ ಸರ್ಕಾರವೇ ಸ್ವಂತ ಅನುದಾನ ಭರಿಸಿ ಉದ್ಯೋಗ ಭದ್ರತೆ ಒದಗಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now