in

ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

suddione whatsapp group join

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜನವರಿ.10) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿದಾರರ ವಯಸ್ಸು 18 ರಿಂದ 55ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲ ಅರ್ಜಿ ಆಹ್ವಾನಿಸಲಾಗಿದೆ.

ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಫೆಬ್ರವರಿ 20 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್‍ಸೈಟ್

www.karnataka.gov.in/dbcdc

ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು  ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ : ಹಿಂದಿ ದಿವಸ್ ಬಗ್ಗೆ ಆಕ್ರೋಶಗೊಂಡ ಜೆಡಿಎಸ್

ಸಂಕ್ರಾಂತಿ ಒಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಕೋರೆಗಾಂವ್ ರೀತಿಯಲ್ಲಿ ಚಳುವಳಿ : ಬಸವ ಹರಳಯ್ಯ ಸ್ವಾಮೀಜಿ