ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜನವರಿ.10) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿದಾರರ ವಯಸ್ಸು 18 ರಿಂದ 55ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲ ಅರ್ಜಿ ಆಹ್ವಾನಿಸಲಾಗಿದೆ.
ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಫೆಬ್ರವರಿ 20 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್ಸೈಟ್
www.karnataka.gov.in/dbcdc
ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…