Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲೈಂಗಿಕ ದೌರ್ಜನ್ಯ ಕೇಸ್ : ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್

---Advertisement---

ಬೆಂಗಳೂರು: ಮನೆಕೆಲಾಸದಾಕೆ‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಒಂದಷ್ಟು ದಿನ ಹೆಚ್.ಡಿ.ರೇವಣ್ಣ ಅವರು ಸೆರೆವಾಸವನ್ನು ಅನುಭವಿಸಿದ್ದರು. ಇದೀಗ ಆ ಕೇಸ್ ನಿಂದ ಮುಕ್ತಿ ಸಿಕ್ಕಿದೆ. ಹೆಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ.

ಹೊಳೆನರಸೀಪುರದ ಮಹಿಳೆ ಹೆಚ್.ಡಿ.ರೇವಣ್ಣ ವಿರುದ್ಧ ದೂರು ದಾಖಲಿಸಿದ್ದರು. ಎರಡು ಸೆಕ್ಷನ್ ಗಳಲ್ಲಿ ಹೈಕೋರ್ಟ್ ಒಂದು ಸೆಕ್ಷನ್ ರದ್ದುಪಡಿಸಿತ್ತು.  354 ಎ ಅಡಿಯ ಕೇಸ್ ಕಾಗ್ನಿಜೆನ್ಸ್ ಪಡೆಯಲು 42 ನೇ ಎಸಿಜೆಎಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಐಪಿಸಿ ಸೆಕ್ಷನ್ 354ಎ ಅಡಿಯ ಕೇಸ್ ರದ್ದಾಗಿದೆ.  ಮಹಿಳೆ ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕಾಗಿ ಐಪಿಸಿ ಸೆಕ್ಷನ್ 354ಎ ಅಡಿಯ  ಆರೋಪದ ಕೇಸ್ ಅನ್ನು ಪರಿಗಣಿಸಲು ನಿರಾಕರಿಸಿದೆ. ಬೆಂಗಳೂರಿನ  42 ನೇ ಎಸಿಜೆಎಂ ಜಡ್ಜ್ ಕೆ.ಎನ್.ಶಿವಕುಮಾರ್  ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಯಾವುದೇ ಪುರುಷ ಈ ಕೆಳಗಿನ ಕೃತ್ಯಗಳಲ್ಲಿ ತೊಡಗಿದರೆ, ಅವನು ಲೈಂಗಿಕ ಕಿರುಕುಳದ ಅಪರಾಧವನ್ನು ಮಾಡಿದ್ದಾನೆ ಎಂದು ಪರಿಗಣಿಸಲಾಗುತ್ತದೆ:
ಅಸಮ್ಮತಿದಾಯಕ ಸ್ಪರ್ಶ ಮತ್ತು ಮುನ್ನಡೆಗಳು: ಅಸಮ್ಮತಿಯೊಂದಿಗೆ ಮತ್ತು ಸ್ಪಷ್ಟವಾಗಿ ಲೈಂಗಿಕ ಆಸಕ್ತಿಗಳನ್ನು ತೋರಿಸುವ ದೈಹಿಕ ಸ್ಪರ್ಶ.
ಲೈಂಗಿಕ ಬೇಡಿಕೆಗಳು: ಲೈಂಗಿಕ ಪರವಾಗಿ ಬೇಡಿಕೆ ಅಥವಾ ವಿನಂತಿ ಮಾಡುವುದು.
ಅಶ್ಲೀಲತೆ ತೋರಿಸುವುದು: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲ ಚಿತ್ರಗಳನ್ನು ತೋರಿಸುವುದು.
ಲೈಂಗಿಕ ಬಣ್ಣದ ಟೀಕೆಗಳು: ಲೈಂಗಿಕವಾಗಿ suggestive ಅಥವಾ ಆಕ್ರಮಣಕಾರಿ ಟೀಕೆಗಳನ್ನು ಮಾಡುವುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now