Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಲೈಂಗಿಕ ಕಿರುಕುಳ ಆರೋಪ : ಬಿಜೆಪಿ ಸಂಸದರನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಿ : ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.31): ಲೈಂಗಿಕ ಕಿರುಕುಳ ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಚರಣ್‍ಸಿಂಗ್‍ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಮಹಿಳಾ ಕುಸ್ತಿಪಟುಗಳು ನ್ಯಾಯಕ್ಕಾಗಿ ಹೋರಾಡುತ್ತಿದ್ದರೆ ದೆಹಲಿ ಪೊಲೀಸರು ಅಮಾನುಷವಾಗಿ ನಡೆದುಕೊಳ್ಳುತ್ತಿದ್ದಾರೆ. ಕೂಡಲೆ ಬ್ರಿಜ್ ಭೂಷಣ್ ಚರಣ್‍ಸಿಂಗ್‍ನನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯವರು ಒತ್ತಾಯಿಸಿದರು.

ಭೇಟಿ ಬಚಾವೋ ಭೇಟಿ ಪಡಾವೋ ಎಂದು ಹೇಳುತ್ತಿರುವ ಪ್ರಧಾನಿ ಮೋದಿ ಮಹಿಳಾ ಕುಸ್ತಿಪಟುಗಳ ಅಳಲು ಕೇಳದಿರುವುದು ಅತ್ಯಂತ ನೋವಿನ ಸಂಗತಿ ಎಂದು ಪ್ರತಿಭಟನಾನಿರತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಪಿ.ಎಂ. ತಾಲ್ಲೂಕು ಅಧ್ಯಕ್ಷ ಮಹಮದ್ ರಫಿ, ಅಲ್ಪಸಂಖ್ಯಾತ ವಿಭಾಗದ ತಾಲ್ಲೂಕು ಅಧ್ಯಕ್ಷ ದಾದಾಪೀರ್ ಎಸ್. ಉಪಾಧ್ಯಕ್ಷ ದುರುಗೇಶಿ, ಕಟ್ಟಡ ಕಾರ್ಮಿಕರ ವಿಭಾಗದ ತಾಲ್ಲೂಕು ಅಧ್ಯಕ್ಷ ಮೆಹಬೂಬ್ ಭಾಷ, ಕಾರ್ಯದರ್ಶಿಗಳಾದ ಇಲ್ಲು, ಹೆಚ್.ಪ್ರಭು, ಉಪಾಧ್ಯಕ್ಷ ಮಹಮದ್ ರಸೂಲ್ ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...