Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ : ಡಾ.ಶಿವಣ್ಣ ವಿಷಾದ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 08 : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳಗಳು ಇನ್ನು ನಿಂತಿಲ್ಲ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಣ್ಣ ವಿಷಾದಸಿದರು.

 

ಅರಿವಿನ ಹೊನಲು ಸಂಸ್ಥೆಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪೋಕ್ಸೋ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

 

ಕೆಲಸ ಮಾಡುವ ಜಾಗದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳನ್ನು ನಿಯಂತ್ರಿಸುವುದಕ್ಕಾಗಿ ಅನೇಕ ಕಾನೂನುಗಳಿವೆ. ಆದರೂ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಲೈಂಗಿಕ ಕಿರುಕುಳಗಳು ನಿಂತಿಲ್ಲ. ಮಹಿಳೆಯರು ತಮ್ಮ ಮೇಲೆ ದೌರ್ಜನ್ಯಗಳಾದ ಅಂಜಿಕೆಯಿಲ್ಲದೆ ಠಾಣೆಗಳಲ್ಲಿ ದೂರು ನೀಡಲು ಹಿಂಜರಿಯಬಾರದು. ನಿಮ್ಮ ರಕ್ಷಣೆಗಾಗಿಯೇ ಕಾನೂನು ಇರುವುದು ಎಂದು ಜಾಗೃತಿ ಮೂಡಿಸಿದರು.

 

ಅರಿವಿನ ಹೊನಲು ಸಂಸ್ಥೆ ಅಧ್ಯಕ್ಷ ಅಣ್ಣಪ್ಪ ಮಾತನಾಡಿ ಮಹಿಳೆ ಅಬಲೆಯಲ್ಲ. ಸಬಲೆ ಎನ್ನುವುದು ಮರೆಯಬಾರದು. ಅಡುಗೆ ಮನೆಗೆ ಮಾತ್ರ ಸೀಮಿತ ಎನ್ನುವ ಕೀಳರಿಮೆಯನ್ನು ಬಿಟ್ಟು ಮಹಿಳೆ ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಪೋಕ್ಸೋ ಕಾಯಿದೆ ಗಟ್ಟಿಗೊಳ್ಳಲು ಸಾಧ್ಯ. ಮಹಿಳೆಯರ ರಕ್ಷಣೆಗಾಗಿಯೇ ಅನೇಕ ಕಾನೂನುಗಳು ಕೆಲಸ ಮಾಡುತ್ತಿವೆ ಎಂದು ಹೇಳಿದರು.

 

ಅಟ್ರಾಸಿಟಿ ಕಮಿಟಿ ಸದಸ್ಯ ಅವಿನಾಶ್ ಸಿ.ಎಲ್. ಡಾ.ಜಯಲಕ್ಷ್ಮಮ್ಮ, ಡಾ.ಮಧುಸೂದನ, ಹಲಸಂದಿ ಸತೀಶ್, ಗಾಯಿತ್ರಮ್ಮ, ಭೂತರಾಜು, ನಾಗರಾಜ್ ಇವರುಗಳು ಪೋಕ್ಸೊ ಕುರಿತು ಮಾತನಾಡಿದರು.
ಅರಿವಿನ ಹೊನಲು ಸಂಸ್ಥೆ ಕಾರ್ಯದರ್ಶಿ ಅನಿಲ್ ಎಸ್.ಅಳಗವಾಡಿ, ಉಪಾಧ್ಯಕ್ಷ ನಾಗರಾಜ್ ಕೆ. ನಿರ್ದೇಶಕರುಗಳಾದ ರಘು, ರಮೇಶ್ ಲಿಂಗದಹಳ್ಳಿ, ದಿಲೀಪ್ ಆನಿವಾಳ, ಸುದೀಪ್ ಆರ್, ಜಯಣ್ಣ, ಟಿ.ಕಲ್ಯಾಣ್‍ಕುಮಾರ್, ಎಸ್.ಅಣ್ಣೇಶ್, ಆರ್.ನಿತಿನ್, ಸಿ.ಮಂಜು, ಕೋಟೇಶ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now