Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಸವಹರಳಯ್ಯ ಸ್ವಾಮೀಜಿಯವರ ಮೇಲೆ ಹಲ್ಲೆ ಮಾಡಿದವರ ವಿರುದ್ದ ಕ್ರಮಕ್ಕೆ ಷಡಕ್ಷರಮುನಿ ಸ್ವಾಮೀಜಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 08 :  ಮೇಲ್ವರ್ಗದ ಜನಾಂಗದಿಂದ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಐಮಂಗಲದ ಬಸವಹರಳಯ್ಯ ಸ್ವಾಮೀಜಿರವರಿಗೆ ರಕ್ಷಣೆ ನೀಡಿ ಹಲ್ಲೆಕೋರರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಹಿರಿಯೂರಿನ ಆದಿಜಾಂಬವ ಮಠದ ಷಡಕ್ಷರಮುನಿ ಸ್ವಾಮೀಜಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.

 

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹರಳಯ್ಯ ಸ್ವಾಮೀಜಿರವರಿಗೆ ಆತ್ಮಸ್ಥೈರ್ಯ ತುಂಬಿದ ಷಡಕ್ಷರಮುನಿ ಸ್ವಾಮೀಜಿ ಮಠದ ಜಾಗದ ವಿಚಾರವಾಗಿ ಹಿರಿಯೂರು ತಾಲ್ಲೂಕು ಆದಿರಾಳು ಗ್ರಾಮದ ಲಿಂಗಾಯಿತ ಕೋಮಿಗೆ ಸೇರಿದ ಸಿದ್ದೇಶ್ವರ, ಆಕಾಶ್, ಶಿವಪ್ರಕಾಶ್ ಮತ್ತು ಬೆಂಬಲಿಗರು ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿರುವುದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಇದೊಂದು ಹಲ್ಲೆಯಲ್ಲ. ಹತ್ಯೆಯ ಸಂಚು. ಐಮಂಗಲ ಠಾಣೆಗೆ ದೂರು ನೀಡಲು ಸ್ವಾಮೀಜಿ ಹೋಗಿದ್ದಾಗ ಅಲ್ಲಿಯೂ ಪೊಲೀಸರ ಎದುರಿನಲ್ಲೇ ಹಲ್ಲೆ ನಡೆಸಿರುವುದನ್ನು ನೋಡಿದರೆ ಇವರ ದೌರ್ಜನ್ಯ ಮಿತಿ ಮೀರಿದೆ ಎನ್ನುವುದು ಗೊತ್ತಾಗುತ್ತದೆ. ಹಲ್ಲೆಕೋರರನ್ನು ರೌಡಿ ಪಟ್ಟಿಗೆ ಸೇರಿಸಿ ಗಡಿಪಾರು ಮಾಡಬೇಕು. ಈಗಾಗಲೆ ನ್ಯಾಯಾಂಗ ಬಂಧನದಲ್ಲಿರುವವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದೆಂದು ಷಡಕ್ಷರ ಮುನಿ ಸ್ವಾಮೀಜಿ ಆಗ್ರಹಿಸಿದರು.

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿಬಾಬು ಸ್ವಾಮೀಜಿಗಳಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂ.ಗಳ ನೆರವು ನೀಡಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಪ್ರಕಾಶ್ ಬೀರಾವರ, ಎಂ.ಡಿ.ರವಿ, ಡಿಎಸ್‍ಎಸ್ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ, ಬೋರನಕುಂಟೆ ಜೀವೇಶ್, ಪಟ್ರೆಹಳ್ಳಿ ಮಹೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now