ಬೆಂಗಳೂರು: ನಾಡಿನ ಮಹಿಳೆಯರು ಸ್ವತಂತ್ರವಾಗಿ ಸಂಚರಿಸಿ, ಸ್ವಾವಲಂಬಿ ಹಾಗೂ ನೆಮ್ಮದಿಯ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಉದಾತ್ತ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯು ಇಂದಿಗೆ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಯೋಜನೆಯು ನಿರೀಕ್ಷೆಗೂ ಮೀರಿದ ಯಶಸ್ಸು ಕಾಣುವ ಮೂಲಕ ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ.
ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು,ನಾಡಿನ ಪ್ರತಿ ಹೆಣ್ಣು ಸ್ವತಂತ್ರವಾಗಿ ಸಂಚರಿಸಿ, ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ನೆಮ್ಮದಿಯ ಜೀವನವನ್ನು ಕಾಣಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯು ಇಂದಿಗೆ ಯಶಸ್ವಿಯಾಗಿ 3 ವರುಷಗಳನ್ನು ಪೂರೈಸಿದೆ. ಉದ್ಯೋಗ, ಶಿಕ್ಷಣ, ಆರೋಗ್ಯ ಮುಂತಾದ ಉದ್ದೇಶಗಳಿಗಾಗಿ ಈವರೆಗೆ 753.7 ಕೋಟಿ ಬಾರಿ ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಬೆಳೆಸಿದ್ದಾರೆ. ಈವರೆಗಿನ ಒಟ್ಟು ಟಿಕೆಟ್ ಮೌಲ್ಯ ರೂ.19,771 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಈ ಯೋಜನೆಯು ನವ ಇತಿಹಾಸ ಸೃಷ್ಟಿಸಿದೆ.
ಶಕ್ತಿ ಯೋಜನೆ ಜಾರಿಯಿಂದಾಗಿ ಸಾರಿಗೆ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ 40% ಹೆಚ್ಚಾಗಿದ್ದು ಅಲ್ಲದೇ, ಒಟ್ಟು ಪ್ರಯಾಣಿಕರಲ್ಲಿ 60% ಮಹಿಳೆಯರೇ ಇದ್ದಾರೆ. ಯೋಜನೆಯೊಂದು ನಮ್ಮ ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪಿ, ಸಮಾಜದಲ್ಲಿ ಧನಾತ್ಮಕ ಬದಲಾವಣೆ ಮೂಡಿಸುತ್ತಿರುವುದು ನನಗೆ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.
ನಾಡಿನ ಪ್ರತಿ ಹೆಣ್ಣು ಸ್ವತಂತ್ರವಾಗಿ ಸಂಚರಿಸಿ, ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ನೆಮ್ಮದಿಯ ಜೀವನವನ್ನು ಕಾಣಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯು ಇಂದಿಗೆ ಯಶಸ್ವಿಯಾಗಿ 3 ವರುಷಗಳನ್ನು ಪೂರೈಸಿದೆ.
ಉದ್ಯೋಗ, ಶಿಕ್ಷಣ, ಆರೋಗ್ಯ ಮುಂತಾದ ಉದ್ದೇಶಗಳಿಗಾಗಿ ಈವರೆಗೆ 753.7 ಕೋಟಿ ಬಾರಿ ಮಹಿಳೆಯರು ಸಾರಿಗೆ ಬಸ್… pic.twitter.com/a3kSZ8e3UW
— DIPR Karnataka (@KarnatakaVarthe) June 11, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















