Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿವೈ ರಾಘವೇಂದ್ರರನ್ನು ಗೆಲ್ಲಿಸಿ ಎಂದ ಶಾಮನೂರು: ಕಾಂಗ್ರೆಸ್ ನಾಯಕರಿಂದ ಆಕ್ರೋಶ

---Advertisement---

ಮೈಸೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಎಸ್ವೈ ಪುತ್ರ ಬಿವೈ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪ ನೀಡಿದ ಹೇಳಿಕೆ ಕಾಂಗ್ರೆಸ್ ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬ ಒತ್ತಾಯ ಕೇಳಿ ಬರುತ್ತಿದೆ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ಮೈಸೂರಿನಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್, ಹಣವಿದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ. ಸಿಎಂ, ಮಂತ್ರಿಗಳು ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಶಾಮನೂರು ಗೆಸ್ಟ್ ಹೌಸ್ ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಜೀವಂತವಾಗಿದ್ದರೆ ಶಾಮನೂರು ಅವರನ್ನು ಅಮಾನತು ಮಾಡಿ ಎಂದು ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ..? ಶಾಮನೂರು ಶಿವಶಂಕರಪ್ಪರನ್ನು ಕಾಂಗ್ರೆಸ್ ನಿಂದ ಹೊರಗೆ ತಳ್ಳಿ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನಿಗೆ ನಾಚಿಕೆ ಆಗಲ್ವಾ..? ಎಂದು ವಾಗ್ದಾಳಿ ನಡೆಸಿದರು.

 

ನಮ್ಮವರೇ ಸರಿ ಇಲ್ಲ. ನಮ್ಮ ಮಂತ್ರಿಗಳು ಮುಖ್ಯಮಂತ್ರಿಗಳು ಅವರ ಮೇಲೆ ಡಿಫೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಿವಕುಮಾರ್ ಬಂಡೆಯಾಗಿದ್ದರೆ ಅಮಾನತು ಮಾಡಿ. ಅವನು ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ ಎಂದು ಏಕವಚನದಲ್ಲಿ ಶ್ಯಾಮನೂರು ಶಿವಶಂಕರಪ್ಪ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಜೊತೆಗೆ ಚಿತ್ರದುರ್ಗದ ಸಭೆಯಲ್ಲಿ ಸಚಿವ ಕೆ ಎನ್ ರಾಜಣ್ಣ ಕೂಡ ಶಾಮನೂರು ಶಿವಶಂಕರಪ್ಪ ಬಗ್ಗೆ ಆಕ್ರೋಶ ಹೊರ ಹಾಕಿದ್ದು, ಶಾಮನೂರು ಶಿವಶಂಕರಪ್ಪರಿಗೆ ಇದು ಶೋಭೆ ತರುವಂತದ್ದಲ್ಲ. ಕೆಪಿಸಿಸಿ ಅಧ್ಯಕ್ಷರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...