ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ..!

1 Min Read

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ಇಂದು ನಿಧನರಾಗಿದ್ದಾರೆ. ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರಿಗೆ ಈಗ 94 ವರ್ಷ ವಯಸ್ಸಾಗಿತ್ತು. ಹಿರಿಯ ಶಾಸಕ ಎಂಬ ಹೆಗ್ಗಳಿಕೆಯು ಇವರಿಗೆ ಇತ್ತು.

ಇತ್ತೀಚೆಗೆ ಅನಾರೋಗ್ಯ ಕಾರಣ, ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದ ಬಗ್ಗೆ ವದಂತಿಯೂ ಹಬ್ಬಿತ್ತು. ಅವರ ಮಗ ಎಸ್ ಎಸ್ ಮಲ್ಲಿಕಾರ್ಜುನ ಅವರು ತಂದೆಯ ಆರೋಗ್ಯ ಚೆನ್ನಾಗಿದೆ ಎಂದಿದ್ದರು. ಬೇಗನೇ ಚೇತರಿಸಿಕೊಳ್ಳಲಿದ್ದಾರೆ ಎಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಸಂತಾಪ : ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ವಿವಿಧ ಪಕ್ಷಗಳ ಮುಖಂಡರು ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬಿ. ಸೋಮಶೇಖರ್ ಸಂತಾಪ :
ಕಾಂಗ್ರೆಸ್ ಮುಖಂಡ, ಸಾವಯವ ಕೃಷಿ ಉನ್ನತ ಮಟ್ಟದ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ 2021 ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಬಿ. ಸೋಮಶೇಖರ್ ಅವರು ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Share This Article
Enable Notifications OK No thanks