ದಾವಣಗೆರೆ: ಚುನಾವಣೆ ದಿನಾಂಕ ದಿನ ಕಳೆದಂತೆ ಹತ್ತಿರವಾಗುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯೂ ಶುರುವಾಗಿದೆ. ಏಪ್ರಿಲ್ 24 ನಾಮಪತ್ರ ಸಲ್ಲಿಕೆಗೆ ಕಡೆ ದಿನಾಂಕವಾಗಿದೆ. ನಿನ್ನೆ ಶಾಮನೂರು ಪುತ್ರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಾಜಿ ಸಚಿವ ಹಾಗೂ ದಾವಣಗೆರೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಎಸ್ ಮಲ್ಲಿಕಾರ್ಜುನ ಅವರು ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಆಸ್ತಿ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಚರಾಸ್ತಿ, ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ. ಅದರಲ್ಲಿ 150 ಕೋಟಿ ಆಸ್ತಿಯ ಒಡೆಯನಾಗಿದ್ದಾರೆ.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದಲ್ಲಿ 150 ಕೋಟಿ ಘೋಷಣೆ ಮಾಡಿದ್ದಾರೆ. ತಮ್ಮ ಹೆಸರಿನಲ್ಲಿ 9.79 ಕೋಟಿ ಚರಾಸ್ತಿ, 27.28 ಕೋಟಿ ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ. ಶ್ಯಾಮನೂರು ಶಿವಶಂಕರಪ್ಪ ಅವರ ಬಳಿ 226.03 ಎಕರೆ ಕೃಷಿ ಭೂಮಿ ಇದೆ. 16 ಕೆಜಿ ಚಿನ್ನ, 6 ಕೆಜಿಗೂ ಹೆಚ್ಚು ಬೆಳ್ಳಿ ಇದೆ. ಎಸ್ ಎಸ್ ಮಲ್ಲಿಕಾರ್ಜುನ ಅವರ ಬಳಿ 23 ಕೋಟಿ ರೂಪಾಯಿ ಸಾಲ ಇದೆ. ಇನ್ನೂ ಪ್ರಭಾ ಮಲ್ಲಿಕಾರ್ಜುನ ಬಳಿ 9 ಕೋಟಿ ಚರಾಸ್ತಿ, ಸ್ಥಿರಾಸ್ತಿ ಇದೆ. 97.28 ಲಕ್ಷ ಸಾಲ ಇರುವುದಾಗಿ ಘೋಷಣೆ ಮಾಡಿದ್ದಾರೆ.