ಚಿತ್ರದುರ್ಗ. ಫೆ.07: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್ವೆಲ್ ವಿದ್ಯುತ್ ಸ್ಥಾವರದಲ್ಲಿ ಬ್ರೇಕರ್ ಅಳವಡಿಸುವ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ಶಾಂತಿ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಫೆ.09 ಮತ್ತು 10ರಂದು ಸ್ಥಗಿತಗೊಳಿಸಲಾಗುತ್ತಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














