ಚಿತ್ರದುರ್ಗ. ಫೆ.26: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ನಿರ್ವಹಣೆಯ ಕೆಲಸ ಕೈಗೊಳ್ಳಬೇಕಿರುವುದರಿಂದ ಇದೇ ಫೆ.28 ರಿಂದ ಮಾರ್ಚ್ 01 ರವರೆಗೆ ಎರಡು ದಿನಗಳ ಕಾಲ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ. ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










