ವರದಿ ಮತ್ತು ಫೋಟೋ ಕೃಪೆ,
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ದಸರಾ ನವರಾತ್ರಿ ವಿಶೇಷವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ ಚಂದ್ರಘಂಟಾ ಅಲಂಕಾರ ಮಾಡಲಾಗಿತ್ತು.
ವೀಳೆದೆಲೆ ಹಾಗೂ ವಿವಿಧ ಬಗೆಯ ಹೂವು ಹಾರಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಕಣಿವೆಮಾರಮ್ಮನಿಗೆ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿದರು.
ಲಕ್ಷ್ಮಿಸಾಗರ ಸಮೀಪವಿರುವ ತುಳಜಾ ಭವಾನಿ ದೇವಸ್ಥಾನದಲ್ಲಿ ದಸರಾ ನವರಾತ್ರಿ ಅಂಗವಾಗಿ ವಿಜೃಂಭಣೆಯಿಂದ ಅಲಂಕರಿಸಲಾಗಿತ್ತು.
ಲಕ್ಷ್ಮಿಸಾಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತುಳಜಾ ಭವಾನಿ ದೇವಿಯ ಅಲಂಕಾರವನ್ನು ಕಣ್ತುಂಬಿಕೊಂಡು ಭಕ್ತಿ ಸಮರ್ಪಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















