Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶರತ್ ಗೆ” ದ ಮದರ್ ಆಫ್ ಸೋಶಿಯಲ್ ವರ್ಕ್ ಜೇನ ಅಡಮ್ಸ್ ” ರಾಜ್ಯ ಪ್ರಶಸ್ತಿ ಪ್ರದಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 12 : ಚಿತ್ರದುರ್ಗ ಬ್ರೈನ್ ಹೆಲ್ತ್ ಕ್ಲಿನಿಕ್ ನ ಜಿಲ್ಲಾ ಸಂಯೋಜಕ ಶರತ್. ಪಿ. ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ” ದ ಮದರ್ ಆಫ್ ಸೋಶಿಯಲ್ ವರ್ಕ್ ಜೇನ ಅಡಮ್ಸ್ ” ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೋಶಿಯಲ್ ವರ್ಕ್ಸ್ ವೆಲ್ಫೇರ್ ಅಸೋಸಿಯೇಷನ್ ರಾಜ್ಯ ಸಮಿತಿ ವತಿಯಿಂದ ಭಾನುವಾರ ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಸಮಾವೇಶ ಕುರಿತು ಪೂರ್ವಬಾವಿ ಸಭೆಯನ್ನು ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿಪರ ಸಾಮಾಜಿಕ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ವಿಶ್ವದಾಖಲೆ ಪ್ರಶಸ್ತಿ ಪುರಸ್ಕೃತರಾದ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಸಂತೋಷಕುಮಾರ ಎಂ ಅವರನ್ನು ನಮ್ಮ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಸಂತೋಷ್ ಕುಮಾರ್, ದಾವಣಗೆರೆ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರದ ಡಾ. ಲೋಕೇಶ್ , ರಾಜೇಂದ್ರ ಕುಮಾರ್, ಮಹಾಲಿಂಗಪ್ಪ, ಡಾ. ಮಹೇಶ್ ಡಾ. ಪಾಂಡುರಂಗ ಸೇರಿದಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಮತ್ತು ಸದಸ್ಯರು ವಿದ್ಯಾರ್ಥಿಗಳು ನೌಕರರು ಪದವಿಧರರು,
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ನಾಗರಾಜ್ GO ಕಭಿ ತಂಡದ ,ಸಿಬ್ಬಂದಿಗಳು , ಆರೋಗ್ಯ ಇಲಾಖೆಯ ನೌಕರರು ,ಬುಕ್ಕಂಬೂದಿ ಗ್ರಾಮಸ್ಥರು ಮತ್ತು ಸ್ನೇಹಿತರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...