Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2022ರಿಂದ ಸುಸ್ತಾಗಿದ್ದರು.. 2023ಕ್ಕೆ ಸಂಪೂರ್ಣ ಸುಸ್ತಾಗಿದ್ದರು : ತಾಯಿ ನೆನೆದು ಭಾವುಕರಾದ ವಿನೋದ್ ರಾಜ್

---Advertisement---

ನೆಲಮಂಗಲ: 85 ವರ್ಷದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಸೋಲದೇವನಹಳ್ಳಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಧ್ಯಾಹ್ನದ ತನಕ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಳಿಕ ಅವರ ತೋಟದ ಮನೆಯಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಲಿದೆ.

ವಿನೋದ್ ರಾಜ್ ಅವರಿಗೆ ತಾಯಿ ಮೇಲೆ ಅದೆಷ್ಟು ಪ್ರೀತಿ, ಗೌರವ ಎಂಬುದನ್ನು ಬಾಯಿ ಬಿಟ್ಟು ಹೇಳುವ ಹಂಗಿಲ್ಲ. ಅದನ್ನ ಇಡೀ ರಾಜ್ಯವೇ ನೋಡಿದೆ. ತಾಯಿಗಾಗಿ ಸೋಲದೇವನಹಳ್ಳಿಯಲ್ಲಿಯೇ ಜೀವನ ಮುಂದುವರೆಸಿದ್ದಾರೆ. ತಾಯಿಯ ಜೊತೆಗೆ ಸದಾ ಇರುತ್ತಿದ್ದರು. ಈಗ ಪ್ರೀತಿಯ ತಾಯಿಯನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಈ ನೋವಿನಲ್ಲಿ ತಾಯಿಯ ಬಗ್ಗೆ ಮಾತನಾಡಿದ್ದಾರೆ.

‘2022ರಲ್ಲಿಯೇ ಸುಸ್ತಾಗಿದ್ದರು. 2023ಕ್ಕೆ ಸಂಪೂರ್ಣವಾಗಿ ಸುಸ್ತಾಗಿ ಬಿಟ್ಟರು. ತಮ್ಮ ಜೀವವನ್ನು ಪಶು ಆಸ್ಪತ್ರೆಗಾಗಿ ಮುಡಿಪಾಗಿಟ್ಟಿದ್ದರು. ಹದಿನೈದು ದಿನ ಆಮೇಲೆ ಹೊರಟೆ ಬಿಟ್ಟರು. ಅವರ ಜೀವನ ಸಂತೃಪ್ತಿಯೊಂದಿಗೆ ಹೊರಟಿದ್ದಾರೆ. ಉಳಿದ ಜವಬ್ದಾರಿಯನ್ನು ನನ್ನ ಕೈಯಲ್ಲಿ ಕೊಟ್ಟಿದ್ದಾರೆ. ಅವೆಲ್ಲವನ್ನು ಈಗ ನಾನು ನೆರವೇರಿಸುತ್ತೇನೆ. ಕೊನೆ ಘಳಿಗೆಯಲ್ಲಿ ಬಾಯಿಗೆ ನೀರು ಬಿಟ್ಟೆ, ಜುಡೀತಾ ಕುಡೀತಾನೆ ಪ್ರಾಣ ಬಿಟ್ಟರು. ತಾಯಿ ಶ್ರೇಷ್ಠಾ ಜೀವ. ಆ ಸ್ಥಾನವನ್ನು ಯಾರಿಂದಾನು ತುಂಬುವುದಕ್ಕೆ ಆಗಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಸ್ಯಾಂಡಲ್ ವುಡ್ ತಾರೆಯರೆಲ್ಲ ಆಗಮಿಸಿದ್ದಾರೆ. ಅಂತಿಮ ದರ್ಶನ ಪಡೆದು ಅವರೊಂದಿಗಿನ ನಂಟಿನ ಬಗ್ಗೆ ಮನಬಿಚ್ಚಿ ಮಾತನಾಡುತ್ತಿದ್ದಾರಡ. ಅವರ ಜೊತೆಗಿನ ಒಡನಾಟದ ಬಗ್ಗೆ ಹಂಚಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment