Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ 29 ಮತ್ತು 30ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

---Advertisement---

ಚಿತ್ರದುರ್ಗ. ಜೂನ್24: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಜೂನ್ 29 ಮತ್ತು 30ರಂದು ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ವೈಜ್ಞಾನಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.

 

ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು  ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ ತರುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಆಸಕ್ತ ರೈತರು ಭಾಗವಹಿಸಬಹುದಾಗಿದೆ.

 

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972965479, 9886002248, 9886803637ಗೆ ಸಂಪರ್ಕಿಸಬಹುದು. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ದೂರವಾಣಿ ಸಂಖ್ಯೆಯೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now