Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ಬಿಜೆಪಿ ಮುಖಂಡ ಬಿಜಾಪುರದಲ್ಲಿ ಅರೆಸ್ಟ್..!

---Advertisement---

ಶಿವಮೊಗ್ಗ: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡ ಬಿಜಾಪುರದಲ್ಲಿ ಅರೆಸ್ಟ್ ಆಗಿದ್ದಾರೆ. ಶರತ್ ಕಲ್ಯಾಣಿ ಬಂಧಿತ ಆರೋಪಿಯಾಗಿದ್ದಾರೆ. ಇವರು ಬಿಜೆಪಿಯ ಸೋಷಿಯಲ್ ಮೀಡಿಯಾ ಸಂಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಶರತ್ ಕಲ್ಯಾಣಿ 42 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು. ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಬೇಳೆಸಿದ್ದ ಆರೋಪ ಕೇಳಿ ಬಂದಿತ್ತು. ದೂರು ದಾಖಲಾಗುತ್ತಿದ್ದಂತೆ ಶರತ್ ಕಲ್ಯಾಣಿ ತಲೆ‌ಮರೆಸಿಕೊಂಡಿದ್ದರು. ಸದ್ಯ ಪೊಲೀಸರು ಪತ್ತೆ ಹಚ್ಚಿದ್ದು ಬಿಜಾಪುರದಲ್ಲಿ ಲಾಕ್ ಆಗಿದ್ದಾರೆ.

ಒಂದು ವಾರದಿಂದ ಕಾಣಿಸದೆ ನಾಪತ್ತೆಯಾಗಿದ್ದರು. ಕಡೆಗೂ ಪೊಲೀಸರು ತಮ್ಮ ಕಾಂಟ್ಯಾಕ್ಟ್ ಗಳನ್ನ ಬಳಸಿ, ತಮ್ಮ ಬುದ್ದಿವಂತಿಕೆ ಉಪಯೋಗಿಸಿ ಶರತ್ ಕಲ್ಯಾಣಿಯನ್ನ ಹಿಡಿದಿದ್ದಾರೆ. ಶಿವಮೊಗ್ಗದ ಮಹಿಳಾ ಪೊಲೀಸರು ಆತನ ಕೈಗೆ ಕೋಳ ತೊಡಿಸಿದ್ದಾರೆ.

ಜುಲೈ 26ರಂದು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರೀತಿ ನಾಟಕವಾಡಿ, ನಂಬಿಸಿದ್ದ, ವಂಚನೆ ಕೇಸು ಒಂದು ಕಡೆಯಾದರೆ, ನಾಲ್ಕು ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ ಮಹಿಳಾ ಪೊಲೀಸರು ಈತ‌ನನ್ನು ಎಲ್ಲಿಯೇ ಅಡಗಿದ್ದರು ಬಿಡದೇ, ಅರೆಸ್ಟ್ ಮಾಡಿದ್ದಾರೆ. ಬಿಜೆಪಿಯ ಸೋಷಿಯಲ್ ಮೀಡಿಯಾದ ಸಂಚಾಲಕರಾಗಿ, ಬೇರೊಬ್ಬರಿಗೆ ಮೋಸ ಮಾಡಿದ್ದಾನೆ. ವಿಚ್ಚೇಧಿತ ಮಹಿಳೆಗೆ ಬಣ್ಣ ಬಣ್ಣದ ಮಾತುಗಳನ್ನಾಡಿ, ಮದುವೆ ಆಗಿಯೇ ಬಿಡುತ್ತೇನೆಂದು ನಂಬಿಸಿದ್ದಾನೆ. ಈತ ಹೇಳಿದ್ದೆಲ್ಲ ಸುಳ್ಳು, ಮದುವೆಯಾಗುವುದು ಸುಳ್ಳು ಎಂದು ತಿಳಿದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ತಲೆಮರೆಸಿಕೊಂಡಿದ್ದವನನ್ನು ಕರೆತಂದು, ವಿಚಾರಣೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment