ಕಾಂಗ್ರೆಸ್ ಸರ್ಕಾರ ಉರುಳಿಸಲು ‘ಶಿಂಧೆ’ ಆಪರೇಷನ್: ಸಿಎಂ, ಡಿಸಿಎಂ ಏನಂದ್ರು..?

suddionenews
1 Min Read

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಿಪಕ್ಷ ನಾಯಕರು ಹರಸಾಹಸ ಪಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಖಂಡುತ ರಾಜ್ಯ ಸರ್ಕಾರ ಉರುಳಲಿದೆ ಎಂದು ಬಿಜೆಪಿ ಹಾಗೂ ಜೆಡಿಸ್ ನಾಯಕರು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಅದರಲ್ಲೂ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರ ಐಡಿಯಾವನ್ನು ಕೇಳಿದ್ದಾರಂತೆ. ಈ ಸ್ಪೋಟಕ ಮಾಹಿತಿಯನ್ನು ಶಿಂಧೆ ಅವರೇ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಈ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಏಕನಾಥ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ಮಾಡುವುದಕ್ಕೆ ಆಗುವುದಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ಇಂಡಿಯಾ ಮೈತ್ರಿಕೂಟ ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆಯ ಬಳಿಕ ಶಿಂಧೆ ಸರ್ಕಾರ ಇರುವುದೇ ಅನುಮಾನವಾಗಿದೆ. ಉದ್ದವ್ ಠಾಕ್ರೆ ಬಗ್ಗೆ ಪ್ರಧಾನ ಮಂತ್ರಿ ಮೋದಿ ಅವರು ಯಾಕೆ ಮಾತನಾಡಿದರು. ಎಲ್ಲರೂ ಕೂಡ ಅವರವರ ಪಕ್ಷಕ್ಕೆ ಹೋಗುತ್ತಾರೆ. ಮಹಾ ಸರ್ಕಾರದ ಒರಿಜಿನಲ್ ಶಿವಸೇನಾ ನಾಯಕರು ವಾಪಸ್ ಬರುತ್ತಾರೆ ಎಂದಿದ್ದಾರೆ.

ಇನ್ನು ಸಚಿವ ಸತೀಶ್ ಜಾರಕಿಹೊಳಿ ಮಾತನಾಡು, ಇನ್ನೂ ನಾಲ್ಕು ವರ್ಷ ಕಾಂಗ್ರೆಸ್ ಸರ್ಕಾರವೇ ಇರಲಿದೆ‌. ಸರ್ಕಾರ ಉರುಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಎಂ ಖುರ್ಚಿ ವಿಚಾರದಲ್ಲಿ ನಮ್ಮಲ್ಲಿ ಅಸಮಾಧಾನ ಇರುವುದು ನಿಜ. ಆದರೆ ಅದು ಪಕ್ಷದ ಆಂತರಿಕ ವಿಚಾರ. ಈ ವಿಚಾರಕ್ಕೆ ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *