ಕಾರವಾರ : ಶಾಸಕ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಮಾತಿತ್ತು. ಆದರೆ ಈಗ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಬಲಿಗರೊಂದಿಗೆ ಸೇರ್ಪಡೆಯಾಗಿದ್ದಾರೆ. ವಿವೇಕ ಹೆಬ್ಬಾರ್‌ನ್ನ ಕಾಂಗ್ರೆಸ್ ಹಿರಿಯ ನಾಯಕ ಐವಾನ್ ಡಿಸೋಜಾ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಿವೇಕ್ ಹೆಬ್ಬಾರ್, ಬಿಜೆಪಿಯಲ್ಲಿ ಹುದ್ದೆ ನೀಡುವಲ್ಲಿ ನಮ್ಮ ಕಾರ್ಯಕರ್ತರಿಗೆ ಆದಂತಹ ತಾರತಮ್ಯದಿಂದ ಪಕ್ಷ ತೊರೆದಿದ್ದೇವೆ. ಅದರಲ್ಲೂ ನಮ್ಮ ತಂದೆ ಶಾಸಕ ಹೆಬ್ಬಾರ್‌ರನ್ನ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆಯಲ್ಲಿದ್ದವರೇ ಶಿವರಾಮ ಹೆಬ್ಬಾರನ್ನ ಸೋಲಿಸಲು ಪ್ರಯತ್ನಿಸಿದ್ದರು.
ಪ್ರಮುಖ ಹುದ್ದೆಯಲ್ಲಿದ್ದವರೇ ನಮ್ಮ ತಂದೆಯನ್ನ ಸೋಲಿಸಲು ಯತ್ನಿಸಿದ್ದರು. ಹಲವು ತಿಂಗಳ ಕಾಲ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನ ನಡೆಸಿದ್ದೇವೆ. ಯಾರ್ಯಾರಿಗೆ ದೂರು ಕೊಡಬೇಕು ಕೊಡುವ ಕೆಲಸ ಮಾಡಿದ್ದೇವೆ. ಆದರೆ ಅಂತಿಮವಾಗಿ ಈ ನಿರ್ಧಾರಕ್ಕೆ ಬರುವ ಅನಿವಾರ್ಯತೆ ಎದುರಾಯಿತು. ಕಾರ್ಯಕರ್ತರ ಒತ್ತಾಯದಂತೆ ಈ ನಿರ್ಧಾರ ಕೈಗೊಂಡಿದ್ದೇವೆ.
ಪುತ್ರನನ್ನ ಮೊದಲು ಸೇರ್ಪಡೆಗೊಳಿಸಿ ನಂತರ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗುವ ಚರ್ಚೆ ವಿಚಾರವಾಗಿ ಮಾತನಾಡಿ, ಕಾರ್ಯಕರ್ತರಿಗೆ ನ್ಯಾಯ ಕೊಡಬೇಕಾಗಿತ್ತು, ಅವರ ಭಾವನೆಗಳಿಗೆ ಬೆಲೆ ಕೊಡುವ ಉದ್ದೇಶದಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












