Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಹಾಗೂ ದೇಶದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಶಿವಯೋಗಿ ಸ್ವಾಮೀಜಿ

---Advertisement---

ಸಿ ಎಂ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆ ಜೋರಾಗಿದೆ. ಐದು ವರ್ಷಗಳ ಕಾಲ ನಮ್ಮ ತಂದೆಯೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ . ಆದರೆ ಇದೀಗ ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಗಟ್ಟುಂಡ ಯೋಗಿ ಅಟ್ಟುಂಡ ರಾಯ ಜಟ್ಟಿಯಂತೆ ಮೆಟ್ಟಿ ಮಂತ್ರಿಯ ಪದವಿಗೆ ಅಟ್ಟಿ ಬರುವನೋ ಡಿಕೆಶಿ” ಎಂದು ಭವಿಷ್ಯ ನುಡಿದಿದ್ದಾರೆ.  ಕೆಂಪು ಭಾವುಟ ಹಾರಿಸುವಂತಹ ವ್ಯಕ್ತಿಗಳು ಮರಳಿ ಬರುತ್ತಾರೆ. ಮಾಘ-ಫಾಲ್ಗುಣ ಕಾಲದಲ್ಲಿ ಬದಲಾವಣೆಗಳ ಸೂಚನೆಗಳಿದ್ದು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅಟ್ಟಿ ಬರುವ ಸಾಧ್ಯತೆ ಇದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

 

ಈ ಹಿಂದೆ 2016ರಲ್ಲಿ ‘ಕಂಬಳಿ ಉರುಳುತ್ತದೆ’ ಎಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. 2012ರ ಮಾರ್ಚ್ 12ರಂದು ನರೇಂದ್ರ ಮೋದಿ ಅವರು ಮೂರು ಬಾರಿ ದೇಶದ ಪ್ರಧಾನಿಯಾಗುತ್ತಾರೆ ಎಂದು ನುಡಿದ ಭವಿಷ್ಯ ನಿಜವಾಗಿತ್ತು.

ಮುಂಬರುವ ದಿನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಬದಲಾವಣೆ ನಡೆಯಲಿದೆ .ಹಾಸನ ನಗರದ ಶ್ರೀ ಹಾಸನಾಂಬ ದೇವಾಲಯದಲ್ಲಿ ಆಯೋಜಿಸಲಾದ ಸಾಮೂಹಿಕ 108 ಶ್ರೀ ದೇವಿ ಪುರಾಣ ಪಠಣ, ಹೋಮ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದಿಂದಲೇ ಹೊರಬರುವ ಸಾಧ್ಯತೆಗಳಿವೆ ಎಂದು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...