Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದ್ಯ ಪ್ರಿಯರಿಗೆ ಶಾಕ್: ಕರ್ನಾಟಕದಲ್ಲಿ ಹೊಸ ಅಬಕಾರಿ ನೀತಿ ಜಾರಿ

---Advertisement---

 

ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದೆ. ‘ಆಲ್ಕೋಹಾಲ್ ಇನ್ ಬೇವರೇಜ್’ ಆಧಾರಿತ ತೆರಿಗೆ ಪದ್ಧತಿಗೆ ಸರ್ಕಾರ ಅಧಿಕೃತ ಮುದ್ರೆ ಒತ್ತಿದ್ದು, ಹೊಸ ನೀತಿ ಇಂದಿನಿಂದ ರಾಜ್ಯಾದ್ಯಂತ ಜಾರಿಯಾಗಿದೆ.ಈ ಮೂಲಕ ಕಳೆದ ಆರು ದಶಕಗಳಿಂದ ಜಾರಿಯಲ್ಲಿದ್ದ ಬಲ್ಕ್ ಲೀಟರ್ ಆಧರಿತ ತೆರಿಗೆ ವ್ಯವಸ್ಥೆಗೆ ತೆರೆ ಬಿದ್ದಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಈ ವ್ಯವಸ್ಥೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಸರ್ಕಾರವು ಏಪ್ರಿಲ್ 18ರಂದು ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ನಂತರ ಬಂದ ಅಭಿಪ್ರಾಯಗಳನ್ನು ಪರಿಶೀಲಿಸಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕ) ಎರಡನೇ ತಿದ್ದುಪಡಿ ನಿಯಮಗಳು-2026 ಅನ್ನು ಅಂತಿಮಗೊಳಿಸಲಾಗಿದೆ.ಹೊಸ ನೀತಿಯ ಪ್ರಕಾರ ಬ್ರಾಂಡಿ, ವಿಸ್ಕಿ, ರಮ್, ಜಿನ್, ವೋಡ್ಕಾ, ಬಿಯರ್ ಹಾಗೂ ವೈನ್ ಸೇರಿದಂತೆ ವಿವಿಧ ಮದ್ಯಗಳಲ್ಲಿ ಇರುವ ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ನಿಗದಿಯಾಗಲಿದೆ. ಇದರಿಂದ ಈಗಿರುವ 16 ಅಬಕಾರಿ ಸ್ಲ್ಯಾಬ್‌ಗಳನ್ನು 8ಕ್ಕೆ ಇಳಿಸಲಾಗಿದೆ.

ಈ ಹೊಸ ವ್ಯವಸ್ಥೆಯಿಂದ ಸಾಮಾನ್ಯವಾಗಿ ಹೆಚ್ಚು ಮಾರಾಟವಾಗುವ ಕಡಿಮೆ ದರದ ಮದ್ಯಗಳ ಬೆಲೆಯಲ್ಲಿ ಗಣನೀಯ ಏರಿಕೆ ಆಗುವ ಸಾಧ್ಯತೆ ಇದೆ. ವಿಶೇಷವಾಗಿ 180 ಮಿಲಿ ಟೆಟ್ರಾ ಪ್ಯಾಕ್ ವಿಸ್ಕಿ, ರಮ್, ಬ್ರಾಂಡಿ, ಜಿನ್ ಮತ್ತು ವೋಡ್ಕಾ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.ಇನ್ನೊಂದೆಡೆ, ಪ್ರೀಮಿಯಂ ಮದ್ಯ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಶೇ.16ರಿಂದ ಶೇ.20ರವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಬಹುರಾಷ್ಟ್ರೀಯ ಮದ್ಯ ಕಂಪನಿಗಳಿಗೆ ಅನುಕೂಲವಾಗಬಹುದು. ಆದರೆ ಸ್ಥಳೀಯ ಡಿಸ್ಟಿಲರಿಗಳು ಹಾಗೂ ಪ್ರಾದೇಶಿಕ ಉತ್ಪಾದಕರಿಗೆ ಹಿನ್ನಡೆ ಉಂಟಾಗುವ ಆತಂಕ ವ್ಯಕ್ತವಾಗಿದೆ.

ಕಡಿಮೆ ಬೆಲೆಯ ಭಾರತೀಯ ಮದ್ಯ ಉತ್ಪಾದಕರಿಗೆ ಹೊಸ ತೆರಿಗೆ ವ್ಯವಸ್ಥೆ ಹೆಚ್ಚುವರಿ ಹೊರೆ ತರಬಹುದು. ಜೊತೆಗೆ ಸ್ಥಳೀಯ ಹೂಡಿಕೆ ಹಾಗೂ ಉದ್ಯೋಗಾವಕಾಶಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉದ್ಯಮ ವಲಯ ಅಭಿಪ್ರಾಯಪಟ್ಟಿದೆ.

ಇದಕ್ಕೂ ಮುನ್ನ ಕಳೆದ ಮೂರು ವರ್ಷಗಳಲ್ಲಿ ಮದ್ಯದ ಬೆಲೆ ಹಲವು ಬಾರಿ ಏರಿಕೆಯಾಗಿತ್ತು. ಇದೀಗ ಮತ್ತೊಮ್ಮೆ ತೆರಿಗೆ ಬದಲಾವಣೆಯಿಂದ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಮದ್ಯ ಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಬಿಯರ್ ಬೆಲೆ ಏರಿಕೆಗೆ ಈ ಹಿಂದೆ ಉತ್ಪಾದನಾ ಕಂಪನಿಗಳೂ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now