Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್..!

---Advertisement---

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಶಾಕಿಂಗ್ ಎದುರಾಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ಗೆ ನಿರಾಸೆಯಾಗಿದೆ‌. ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಡಲು ಹೈಕೋರ್ಟ್ ನಿರಾಕರಣೆ ಮಾಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದೆ. ಕೆಳಹಂತದ ನ್ಯಾಯಾಲಯವು ತಮಗೆ ನೀಡಿರುವ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಜಾಮೀನು ನೀಡುವಂತೆ ಮನವಿ ಮಾಟಿದ್ದರು.

 

ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ವಿಧಿಸಿರುವ ಜೀವಿತಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ಮಂಜೂರು ಮಾಡುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಮತ್ತು ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ನೀಡಲು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಆಗಸ್ಟ್ 2025ರಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಪ್ರಜ್ವಲ್ ಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು 11 ಲಕ್ಷಕ್ಕೂ ಅಧಿಕ ವಿಧಿಸಿ ಆದೇಶ ನೀಡಿದೆ. ವಿಧಿಸಲಾಗಿರುವ ದಂಡದ ಬಹುಪಾಲನ್ನು ಸಂತ್ರಸ್ತೆಗೆ ನೀಡುವಂತೆ ಕೋರ್ಟ್ ಹೇಳಿದೆ.

ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ, ಹೈಕೋರ್ಟ್​ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ಬಾಕಿ ಇರುವಾಗಲೇ ತಮಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ನೀಡಲು ನಿರಾಕರಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now