Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಾಮೀನು ಪಡೆದು ಹೊರ ಬಂದ ಪಪ್ಪಿಗೆ ಶಾಕ್ : ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ..!

---Advertisement---

 

ಚಿತ್ರದುರ್ಗ: ಆನ್ಲೈನ್ ಬೆಟ್ಟಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲು ಸೇರಿದ್ದ ಶಾಸಕ ವೀರೇಂದ್ರ ಪಪ್ಪಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಅವರು ಹೊರಗೆ ಬಂದ ಖುಷಿಯಲ್ಲಿ ಅವರ ಅಭಿಮಾನಿಗಳಂತು ಹಾರ ತುರಾಯಿ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿ ಮನೆಗೆ ಕರೆದುಕೊಂಡು ಬಂದಿದ್ದರು. ಈ ಬೆನ್ನಲ್ಲೇ ಇದೀಗ ಪಪ್ಪಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಈ ಹಿಂದೆ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ್ದ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ವೀರೇಂದ್ರ ಪಪ್ಪಿಗೆ ಸೇರಿದ್ದಂತ ಕೃಷಿ ಜಮೀನು, ನಿವೇಶನ ಸೇರಿ ಇತರೆ ಒಟ್ಟು 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ತನಿಖೆ ವೇಳೆ ಹಗರಣದಲ್ಲಿ ಕೆ.ಸಿ.ವೀರೇಂದ್ರ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು ಗೊತ್ತಾಗಿದೆ. ಅಲ್ಲದೇ ನೂರಾರು ಮ್ಯೂಲ್ ಅಕೌಂಟ್ ಬಳಸಿ ಅಕ್ರಮ ಹಣ ವರ್ಗಾವಣೆ ಪತ್ತೆಯಾಗಿದೆ. ತನಿಖೆ ವೇಳೆ ಸಿಕ್ಕ ಈ ಎಲ್ಲಾ ಸಾಕ್ಷ್ಯಗಳ ಆಧಾರದ ಮೇಲೆ ಕೆ ಸಿ ವೀರೇಂದ್ರ ಆಸ್ತಿ ಜಪ್ತಿ ಮಾಡಲಾಗಿದೆ.

ಒಟ್ಟಾರೆ ಈ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಸುಮಾರು 320 ಕೋಟಿ ರೂಪಾಯಿ ಅಷ್ಟು ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಈಗ ಕೃಷಿ ಜಮೀನೆಲ್ಲವನ್ನು ಮುಟ್ಟುಗೋಲು ಹಾಕಿಕೊಂಡು ಶಾಕ್ ನೀಡಿದೆ. ಜೈಲಿಂದ ಹೊರ ಬಂದ ಖುಷಿಯನ್ನು ಅನುಭವಿಸುವುದರೊಳಗೆ ಇಡಿ ಇಂಥ ಶಾಕ್ ನೀಡಿದೆ ವೀರೇಂದ್ರ ಪಪ್ಪಿ ಅವರಿಗೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...