Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

RCB ಮಾರ್ಕೆಟಿಂಗ್ ಮುಖ್ಯಸ್ಥನಿಗೆ ಶಾಕ್ : ಅಂದುಕೊಂಡಂತೆ ಆಗಲೇ ಇಲ್ಲ ಕೋರ್ಟ್ ನಲ್ಲಿ..!

---Advertisement---

ಬೆಂಗಳೂರು; ಆರ್ಸಿಬಿ ವಿಜಯೋತ್ಸವಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರ ತಲೆದಂಡವಾಗಿದೆ. ಆರ್ಸಿಬಿ ಮಾರ್ಕೆಟಿಂಗ್ ಹೆಡ್ ತಲೆದಂಡ ಕೂಡ ಆಗಿದೆ. ನಿಖಿಲ್ ಸೋಸಲೆ ಪೊಲೀಸರ ಅತಿಥಿಯಾಗಿದ್ದಾರೆ. ಈ ಮಧ್ಯೆ ತಮ್ಮ ವಿರುದ್ಧ ದಾಖಲಾಗಿರುವ ದೂರನ್ನ ರದ್ದು ಪಡಿಸುವಂತೆ ಸೋಸಲೆ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಅದಕ್ಕೆ ಸೊಪ್ಪು ಹಾಕಿಲ್ಲ.

ಇಂದು ನಿಖಿಲ್ ಸೋಸಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಕೃಷ್ಣಕುಮಾರ್ ಅವರಿದ್ಧ ಏಕಸದಸ್ಯ ಪೀಠವೂ ವಿಚಾರಣೆ ನಡೆಸಿದೆ. ನಿಖಿಲ್ ಸೋಸಲೆ ಅವರ ಪರವಾಗಿ ವಕೀಲ ಸಂದೇಶ್ ಚೌಟಾ ಅವರು ವಾದ ಮಂಡಿಸಿದರು. ಬಳಿಕ ಅರ್ಜಿ ವಿಚಟರಣೆಯನ್ನು ಜೂನ್ 9ಕ್ಕೆ ಮುಂದೂಡಿಕೆ ಮಾಡಿದ್ದಾರೆ. ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ.

ಸೋಸಲೆ ಪರ ವಾದ ಮಂಡಿಸಿದ ವಕೀಲರಾದ ಸಂದೇಶ್ ಚೌಟಾ, ಸಿಸಿಬಿ ಮೂಲಕ ನಿಖಿಲ್ ಸೋಸಲೆಯನ್ನು ಬಂಧಿಸಲಾಗಿದೆ. ಸಿಐಡಿಗೆ ತನಿಖೆ ಹಸ್ತಾಂತರವಾದಾಗ ಸಿಸಿಬಿಗೆ ಬಂಧಿಸುವ ಅಧಿಕಾರವಿರಲಿಲ್ಲ. ಕಾರಣಗಳನ್ನು ತಿಳಿಸದೆ ಕಾನೂನು ಬಾಹಿರವಾಗಿ ಮಧ್ಯಾಹ್ನ2.20ಕ್ಕೆ ಬಂಧಿಸಲಾಗಿದ ಕಾರಣ ತಲುಪಿಸಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಜೊತೆಗೆ ಸಿಸಿಬಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ ಎಂದಿದ್ದಾರೆ.

ಸಿಸಿಬಿ ಪರ ಎಜೆ ಶಶಿಕಿರಣ್ ವಾದ ಮಂಡಿಸಿದ್ದು, ಈ ಎಲ್ಲಾ ಆರೋಪಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಿಲ್ಲ. ದೇಶ ತೊರೆಯುತ್ತಿರುವಾಗ ಬಂಧಿಸಲಾಗಿದೆ. ಈ ಸಂಬಂಧ ಲಿಖಿತ ರೂಪದಲ್ಲಿ ಉತ್ತರವನ್ನು ನೀಡುತ್ತೇನೆ ಎಂದಿದ್ದಾರೆ.

ಎರಡು‌ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದಕ್ಕೂಡಿದ್ದಾರೆ. ಈ ಮೂಲಕ ಸೋಸಲೆ ಅವರ ನಿರೀಕ್ಷೆಗೆ ಹೊಡೆತ ಬಿದ್ದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment