ಬೆಂಗಳೂರು: ಇಷ್ಟು ದಿನ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸುದ್ದಿ ಹರಿದಾಡುತ್ತಿತ್ತು. ಇದೀಗ ಸರ್ಕಾರ ಅದಕ್ಕೊಂದು ಫೈನಲ್ ಮುದ್ರೆ ಒತ್ತಿದೆ. ಕಡೆಗೂ ಬಸ್ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದು ಬಸ್ ಪ್ರಯಾಣಿಕರಿಗೆ ಮತ್ತಷ್ಟು ಭಾರ ಎನಿಸಿದೆ. ಪ್ರತಿದಿನ ಓಡಾಡುವವರಿಗೆ ಹೆಚ್ಚಿನ ಹೊರೆ ಮಾಡಿದೆ. ಹೊಸ ವರ್ಷದ ಹಾದಿಯಲ್ಲಿರುವಾಗಲೇ ಇಂಥದ್ದೊಂದು ಶಾಕಿಂಗ್ ನ್ಯೂಸ್ ನೀಡಿದೆ.
ಕಳೆದ ಕೆಲವು ದಿನಗಳ ಹಿಂದೆಯೇ ಈ ಸಂಬಂಧ ಸುದ್ದಿ ಹರಿದಾಡಿತ್ತು. ಸರ್ಕಾರಕ್ಕೆ ಇಲಾಖೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿತ್ತು. ಇದರ ನಡುವೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇನ್ನು ಯಾವುದೇ ತೀರ್ಮಾನವಾಗಿಲ್ಲ ಎಂದೇ ಹೇಳಿದ್ದರು. ಇದೀಗ ಬಸ್ ಪ್ರಯಾಣ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ. ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯ ವಿಚಾರವೂ ಪ್ರಸ್ತಾಪವಾಗಿದ್ದು, ದರ ಏರಿಕೆಗೆ ಸಂಪುಟವೂ ಅಸ್ತು ಎಂದಿದೆ. ಮಹತ್ವದ ನಿರ್ಧಾರ ತೆ್ಎದುಕೊಂಡಿದ್ದು, ಶೇಕಡ 15 ರಷ್ಟು ದರ ಏರಿಕೆಗೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಇದುವರೆಗೂ 100 ರೂಪಾಯಿ ಕೊಟ್ಟು ಓಡಾಡುತ್ತಿದ್ದವರು 115 ರೂಪಾಯಿ ಕೊಡಬೇಕಾಗಿದೆ. 200 ರೂಪಾಯಿ ಕೊಟ್ಟು ಓಡಾಡುವವರು 230 ಕೊಡಬೇಕಾಗಿದೆ. ಬೆಂಗಳೂರಿನಿಂದ ದೂರದೂರುಗಳಿಗೆ ಓಡಾಡುವವರು ಹೆಚ್ಚುವರಿಯಾಗಿ ಸರ್ಕಾರಕ್ಕೆ ಹಣ ಕೊಟ್ಟು ಓಡಾಡಬೇಕಾಗಿದೆ. ಅದರಲ್ಲೂ ಹುಬ್ಬಳ್ಳಿ, ಮಂಗಳೂರು ಕಡೆಗೆ ಪ್ರಯಾಣ ಮಾಡುವವರು 75 ರೂಪಾಯಿ ಹೆಚ್ಚುವರಿ ಹಣ ನೀಡಬೇಕಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














