ಭರಮಸಾಗರ-ಚಿತ್ರದುರ್ಗ ರೈಲ್ವೇ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ : ಸಂಸದ ಗೋವಿಂದ ಎಂ ಕಾರಜೋಳ ಹೇಳಿಕೆ

2 Min Read

 

ಚಿತ್ರದುರ್ಗ.  ಜುಲೈ.11: ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ.  ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.

ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲುಮಾರ್ಗ ಕೇಂದ್ರಕ್ಕೆ ಪ್ರಸ್ತಾವ :

ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳು ಇದ್ದಾಗ ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಕೊಡಲಾಗಿತ್ತು. 50:50 ಮಾದರಿಯಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವುದರೊಂದಿಗೆ, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂಮಿ ಹಸ್ತಾಂತರ ಮಾಡುವುದಾಗಿ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಈ ಯೋಜನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚಿತ್ರದುರ್ಗ ಜಿಲ್ಲಾಧಿಕಾರಿಗಳು ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಈ ಹಿಂದೆ ಸಲ್ಲಿಸಿದ್ದ ಯೋಜನೆ ಪ್ರಸ್ತಾವನೆ ಪ್ರತಿ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂಸ್ವಾಧೀನಾಧಿಕಾರಿ ವಿವೇಕ್, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಪರದೀಪ್ ಪುರಿ, ಕಾರ್ಯಪಾಲಕ ಇಂಜಿನಿಯರ್ ರಜತ್ ತುನಹಾ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬಿ.ಪುರುಷೊತಮ್, ವಿಭಾಗೀಯ ಸಹಾಯಕ ಇಂಜಿನಿಯರ್ ನಿತ್ಯಾನಂತದ ಸ್ವಾಮಿ  ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *