ಚಂಡೀಗಢ: ಪ್ರತಿಭಟನೆ ನಡೆಸುತ್ತಿದ್ದ ಶಿವಸೇನೆ ನಾಯಕ ಸುಧೀರ್ ಸೂರಿ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡೇಟಿಗೆ ಬಲಿಯಾಗಿದ್ದಾರೆ. ಹಾಡಹಗಲೇ ನಡೆದ ಈ ಭೀಕರ ಕೊಲೆಗೆ ಪಂಜಾಬ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಅಮೃತಸರದ ದೇವಸ್ಥಾನದ ಮುಂಭಾಗದಲ್ಲಿ ಈ ಘಟನೆ ನಡೆದಿದೆ.
ಅಮೃತಸರ್ ದೇವಸ್ಥಾನದ ಹೊರಗೆ ಹರಿದು ಹೋದ ಫೋಟೋಗಳು, ಮುರಿದ ದೇವರ ಮೂರ್ತಿ ಇರುವುದನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು. ಕೊಲೆಯಾದ ಸುಧೀರ್ ಸೂರಿ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಆದ್ರೆ ದೇವಸ್ಥಾನದ ಮುಂದೆ ನೆರೆದಿದ್ದ ಜನ ನಡುವಿನಿಂದ ಎದ್ದ ವ್ಯಕ್ತಿಯೊಬ್ಬ ಸೂರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.
ಸಿನಿಮಾ ಸ್ಟೈಲ್ ನಲ್ಲಿ ಜನರ ನಡುವೆ ಎದ್ದು ಕೊಲೆ ಮಾಡುವ ರೀತಿಯಲ್ಲಿ ಜನರ ನಡುವೆ ಏಕಾಏಕಿ ಎದ್ದ ವ್ಯಕ್ತಿ ಸುಧೀರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಿಂದ ಸುಧೀರ್ ಪ್ರಾಣ ಕಳೆದುಕೊಂಡಿದ್ದಾರೆ. ಪಂಜಾಬ್ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಹುಡುಕಾಟದಲ್ಲಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…