Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯೇಂದ್ರ ಕಲೆಕ್ಷನ್, ಟ್ರಾನ್ಸ್ ಫರ್ ದಂಧೆ ಬಿಚ್ಚಿಡಬೇಕಾ..?

---Advertisement---

ಬೆಳಗಾವಿ: ರಾಜ್ಯದಲ್ಲಿ ಈಗ ಬಿಜೆಪಿ ಅಧ್ಯಕ್ಷ ವರ್ಸಸ್ ಕಾಂಗ್ರೆಸ್ ಅಧ್ಯಕ್ಷ ಎಂಬಂತೆ ಆಗಿದೆ. ಡಿಕೆ ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಬಿಗ್ ಫೈಟ್ ಶುರುವಾಗಿದೆ‌. ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಹೇಳಿದ ವಿಜಯೇಂದ್ರ ಅವರಿಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಅವರನ್ನ ಕಲೆಕ್ಷನ್ ಕಿಂಗ್ ಅಂತ ಹೇಳಿ ತಿರುಗೇಟು ನೀಡಿದ್ದಾರೆ.

ವಿಜಯೇಂದ್ರ ಕಲೆಕ್ಷನ್, ಟ್ರಾನ್ಸ್ ಫರ್ ದಂಧೆ ಬಿಚ್ಚಿಡಬೇಕಾ..? ಅವರಪ್ಪನ ಹೆಸರನ್ನು ಕೆಡಿಸಿದ್ದೇ ವಿಜಯೇಂದ್ರ. ತಪ್ಪಿಸಿಕೊಂಡು ಹೋಗಿ ಎಲ್ಲೋ ಇರುವುದಲ್ಲ. ಬಂದು ಇಲ್ಲಿ ಅಸೆಂಬ್ಲಿಯಲ್ಲಿ ಮಾತನಾಡಲಿ. ಯಾವ ಖಜಾನೆ, ಯಾವ ಕಲೆಕ್ಷನ್, ಅವರ ಕಲೆಕ್ಷನ್, ಅವರ ಅಕೌಂಟ್ ಗಳು, ಅವರ ಟ್ರಾನ್ಸ್ ಫರ್ ಗಳನ್ನೆಲ್ಲಾ ಬಿಚ್ಚಿಡಬೇಕಾ..? ಬಂದು ಅಸೆಂಬ್ಲಿಯಲ್ಲಿ ಮಾತನಾಡುವುದಕ್ಕೆ ಹೇಳಿ. ನಮಗೂ ಗೊತ್ತಿದೆ ಏನೇನು ಮಾತನಾಡಬೇಕು ಅಂತ. ಆಗ ಮಾತನಾಡುತ್ತೇವೆ. ಮಾತನಾಡಬೇಕಾದರೆ ಬಹಳ ಇತಿ ಮಿತಿಯಿಂದ, ಅದರಲ್ಲೂ ಪಕ್ಷದ ಅಧ್ಯಕ್ಷನಾಗಿ ಮಾತನಾಡಬೇಕು. ಕಲೆಕ್ಷನ್ ಗೆ ಏನಾದ್ರೂ ಇವತ್ತು ಕಿಂಗ್ ಅಂದ್ರೆ ಅದು ವಿಜಯೇಂದ್ರ. ಅವರಪ್ಪನ ಹೆಸರು ಇವತ್ತು ಇಳಿಸಬೇಕು ಅಂದ್ರೆ ಅದು ವಿಜಯೇಂದ್ರ. ಅದನ್ನ ಮರೆಯಬಾರದು ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರದ ಮುಖೇನ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಹಣ ಸಂದಾಯ ಮಾಡುವಂತದ್ದು. ನಾವೂ ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅವರ ಎಟಿಎಂ ಆಗಿ ಪರಿವರ್ತನೆ ಆಗುತ್ತೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನ್ನಾಡಿದ್ದರು. ಇದೀಗ ಆ ಮಾತಿಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...