ಬೆಂಗಳೂರು: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇತ್ತೀಚೆಗೆ ಬಿಜೆಪಿ ಮೇಲೆ ಬಹಿರಂಗವಾಗಿಯೇ ಹೌಹಾರಿದ್ದಾರೆ. ಇದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಮೂಲಕ ಅವರನ್ನು ಸರಿದಾರಿಗೆ ತರುವುದಕ್ಕೆ ಯತ್ನಿಸಿದ್ದಾರೆ. ಅದರಂತೆ ಇಂದು ಮಾಜಿ ಸಿಎಂ ಬಿಎಸ್ವೈ, ರೇಣುಕಾಚಾರ್ಯ ಅವರನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.
ತಮ್ಮ ಮನೆಗೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಕಿವಿ ಮಾತು ಹೇಳಿದ್ದಾರೆ. ಚುನಾವಣೆಯಲ್ಲಿ ನಮಗೆ ಸೋಲಾಗಿರೋದು ನಿಜ. ಪಕ್ಷದಲ್ಲಿ ಸಣ್ಣಪುಟ್ಟ ಆಂತರಿಕ ಸಮಸ್ಯೆಗಳು ಇರೋದು ನಿಜ. ಆದರೆ ನಾವು ಅದನ್ನು ಪಕ್ಷದ ವೇದಿಕೆಯಲ್ಲಿ ಕೂತು ಸರಿಪಡಿಸಿಕೊಳ್ಳಬೇಕೇ ವಿನಃ ಬಹಿರಂಗವಾಗಿ ಹೇಳಿಕೆ ನೀಡಬಾರದು. ಇದರಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ಮಾಜಿ ಶಾಸಕ ರೇಣುಕಾಚಾರ್ಯ ಬಸವರಾಜ್ ಬೊಮ್ಮಾಯಿ, ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಪಕ್ಷದ ಶಿಸ್ತು ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶೋಕಾಸ್ ನೋಟೀಸ್ ಜಾರಿ ಮಾಡಲಾಗಿತ್ತು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…