Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನನ್ನ ವಿರುದ್ಧ ದಾಖಲೆ ತೋರಿಸಲಿ : ಕುಮಾರಸ್ವಾಮಿಗೆ ಡಿಕೆಶಿ ಸವಾಲು

---Advertisement---

ಬೆಂಗಳೂರು: ಬೆಳಗ್ಗೆಯಷ್ಟೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇದೀಗ ಡಿಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ಸವಾಲೊಂದನ್ನ ಹಾಕಿದ್ದಾರೆ. ನನ್ನ ವಿರುದ್ಧ ಇರುವ ದಾಖಲೆಗಳನ್ನ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ ಎಂದು ಸವಲಾಕಿದ್ದಾರೆ.

ನಗರದ ಸಿಟಿ ಸಿವಿಲ್ ಕೋರ್ಟ್ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲೆ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ. ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ. ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ.

ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಹವಮಾನ ಆಗುವಂತದ್ದು ಏನು ಇಲ್ಲ. ಅವರು ಸಿಎಂ ಆಗಿದ್ದಾಗ ನಾನು ಸಾತನೂರಿಗೆ ಚರ್ಚೆಗೆ ಹೋಗಲಿಲ್ಲವೇ..? ನಾನು ಏನು ಮಾಡಿದ್ದೇನೆ. ನನ್ನ ಹುಳುಕು ಏನಿದೆ ಎಂಬುದನ್ನ ನೀನು ಹೇಳು, ನಿನ್ನದು ಏನಿದೆ ಎಂದು ನಾನು ಹೇಳುತ್ತೇನೆ. ನಂತರ ಜನ ತೀರ್ಮಾನ ಮಾಡುತ್ತಾರೆ. ಅವರು ನನ್ನ ಯಾವ ವಿಚಾರ ಬಿಚ್ಚಿಡುತ್ತಾರೆ ಬಿಚ್ಚಿಡಲಿ. ಕೇಂದ್ರ ಸರ್ಕಾರ ಅವರ ಬಳಿಯೇ ಇದೆಯಲ್ಲ ಎಂದು ಸವಾಲು ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now