Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೇಯಸ್ ಮಂಜು ಹುಟ್ಟುಹಬ್ಬಕ್ಕೆ ‘ದಿಲ್‌ದಾರ್’ ಟೀಸರ್ ಗಿಫ್ಟ್: ಆಕ್ಷನ್ ಲುಕ್‌ಗೆ ಭಾರೀ ಮೆಚ್ಚುಗೆ

---Advertisement---

ಪಡ್ಡೆಹುಲಿಯಾಗಿ ಪ್ರೇಕ್ಷಕರನ್ನೆಲ್ಲ ಸೆಳೆದುಕೊಂಡಿರುವ ಶ್ರೇಯಸ್ ಮಂಜು ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅದಕ್ಕೆ ಉಡುಗೊರೆ ಎಂಬಂತೆ ದಿಲ್‌ದಾರ್ ಚಿತ್ರತಂಡ ಬರ್ತ್‌ಡೇ ಟೀಸರ್ ಬಿಡುಗಡೆಗೊಳಿಸಿದೆ. ಆರಂಭದಿಂದಲೂ ಆಕ್ಷನ್ ಲುಕ್ಕಲ್ಲಿ ಮಿಂಚುತ್ತಾ ಬಂದಿರುವ ಶ್ರೇಯಸ್ ಮಂಜು, ಸದರಿ ಟೀಸರ್‌ನಲ್ಲಿ ಮತ್ತೊಂದು ಮಟ್ಟದ ಆಕ್ಷನ್ ಅವತಾರದಲ್ಲಿ ವಿಜೃಂಭಿಸಿದ್ದಾರೆ. ಈ ಟೀಸರ್‌ಗೀಗ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 

ದಿಲ್‌ದಾರ್ ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದೀಗ ಬಹತೇಕ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಯ ಸನ್ನಾಹದಲ್ಲಿದೆ. ಈ ಸಿನಿಮಾ ಈವತ್ತಿನ ಹೊಸ ತಲೆಮಾರಿಗೆ ನೇರಾನೇರ ಹೊಂದಿಕೆಯಾಗುವಂಥಾ ವಿಶಿಷ್ಟ ಕಥೆಯನ್ನೊಳಗೊಂಡಿದೆ ಎಂಬುದು ನಿರ್ದೇಶಕರ ಮಾತು. ಈ ಬರ್ತ್‌ಡೇ ಟೀಸರ್ ಮೂಲಕ ಒಟ್ಟಾರೆ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ನಾಯಕ ಶ್ರೇಯಸ್ ಮಂಜು ಅವರ ಖಡಕ್ ಲುಕ್ ಸ್ಪಷ್ಟವಾಗಿಯೇ ಅನಾವರಣಗೊಂಡಿದೆ.

 

ಏನ್ಸಿಯೆಂಟ್ ಮೂವೀಸ್ ಬ್ಯಾನರ್‌ನಡಿಯಲ್ಲಿ ಡಾ.ಆರ್ ಸಂತೋಷ್ ಕುಮಾರ್ (ಎಸ್‌ವಿಟಿ) ದಿಲ್‌ದಾರ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

 

ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಈಗಾಲೇ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ, ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now