Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅದ್ದೂರಿಯಾಗಿ ನಡೆದ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 :  ಜಿಲ್ಲೆಯ ಭರಮಸಾಗರ ಹೋಬಳಿಯ ಕೂಗುಂಡೆ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಭೀಕರ ಬರದ ನಡುವೆಯೂ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಸಮೃದ್ಧ, ಮಳೆ ಮತ್ತು ಬೆಳೆ ನೀಡಲೆಂದು ಶ್ರೀ ಬಸವಣ್ಣ ದೇವರ ಬಳಿ ಪ್ರಾರ್ಥನೆ ಮಾಡಿದರು.

ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಬಸವಣ್ಣ ದೇವರ ರಥವು ಅತ್ಯಂತ ವಿಜೃಂಭಣೆಯಿಂದ ನಡೆಯಿತು..
ಈ ಜಾತ್ರಾ ಮಹೋತ್ಸವವು ಎಲ್ಲರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಜಾತ್ರಾ ಮಹೋತ್ಸವದಲ್ಲಿ ಅಕ್ಕ ಪಕ್ಕ ಹಳ್ಳಿಗಳ ಜನರು ಸ್ವಾಮಿಯ ದರ್ಶನ ಪಡೆದು ಹೂವು ಹಣ್ಣು ಕಾಯಿ ಮಾಲಾರ್ಪಣೆ ಮಾಡಿ ಸ್ವಾಮಿಯ ಕೃಪೆಗೆ ಪಾತ್ರರಾದರು.

ಅಲ್ಲದೆ ಈ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅತ್ಯಂತ ಯಶಸ್ವಿಯಾಗಿ ನಡೆಯಿತು, ಕೂಗುಂಡೆ ಗ್ರಾಮದ ಹಾಗೂ ನೆರೆ ಹೊರೆಯ ಎಲ್ಲ ಗ್ರಾಮಸ್ಥರು ಈ ಜಾತ್ರೆಗೆ ಸಾಕ್ಷಿಯಾದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment