ಹಿರಿಯೂರು : ನಗರದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವದ ಜಾತ್ರೆ ನಿನ್ನೆಯಿಂದ (ಫೆಬ್ರವರಿ. 03 ರಿಂದ) ಆರಂಭವಾಗಿದೆ.
ನಿನ್ನೆ ರಾತ್ರಿ 8 ಗಂಟೆಗೆ ಕಂಕಣೋತ್ಸವದೊಂದಿಗೆ ಆರಂಭವಾಗಿದೆ.
ಫೆ.04ರಂದು ರಾತ್ರಿ 8ಕ್ಕೆ ಗಿಳಿ ವಾಹನೋತ್ಸವ,
ಫೆ.05ರಂದು ರಾತ್ರಿ 8ಕ್ಕೆ ಗಂಡುಭೇರುಂಡ ವಾಹನೋತ್ಸವ, ಫೆ.06ರಂದು ರಾತ್ರಿ 8.00ಕ್ಕೆ ನವಿಲು ವಾಹನೋತ್ಸವ, ಫೆ.07ರಂದು ರಂದು ರಾತ್ರಿ 8ಕ್ಕೆ ಸಿಂಹ ವಾಹನೋತ್ಸವ, ಫೆ.08ರಂದು ರಾತ್ರಿ 8ಕ್ಕೆ ನಂದಿ ವಾಹನೋತ್ಸವ,
ಫೆ.09ರಂದು ರಾತ್ರಿ 8ಕ್ಕೆ ಸರ್ಪ ವಾಹನೋತ್ಸವ,
ಫೆ.10ರಂದು ರಾತ್ರಿ 8.00ಕ್ಕೆ ಅಶ್ವ ವಾಹನೋತ್ಸವ, ಫೆ.11ರಂದು ರಾತ್ರಿ 8ಕ್ಕೆ ಗಜ ವಾಹನೋತ್ಸವ (ಮೂರು ಕಳಸ ಸ್ಥಾಪನೆ)
ಫೆ.12ರಂದು ಬೆಳಿಗ್ಗೆಯಿಂದ ರಾತ್ರಿಯವರೆಗೆ ಬಸವ ವಾಹನೋತ್ಸವ (ದೊಡ್ಡ ಉತ್ಸವ) ಅಕ್ಕಿ ತಂಬಿಟ್ಟಿನ ಆರತಿ ನಡೆಯಲಿದೆ.
ತಾಲೂಕಿನ ಬೀರೇನಹಳ್ಳಿ ಮಜುರೆ ಕರಿಯಣ್ಣಹಟ್ಟಿ ಗ್ರಾಮದ ವೀರಕರಿಯಣ್ಣ ದೇವರ ನೇತೃತ್ವದಲ್ಲಿ
ಫೆ.13ರಂದು ಬೆಳಿಗ್ಗೆ 10ಕ್ಕೆ ಶಿವಧನಸ್ಸಿನ ಗಂಗಾ ಸ್ನಾನದ ಉತ್ಸವ ನಂತರ ಮಧ್ಯಾಹ್ನ 12ಕ್ಕೆ ಮಘಾ ನಕ್ಷತ್ರದಲ್ಲಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಪ್ರಸಾದ ವಿನಿಯೋಗ, ಸಂಜೆ 5ಕ್ಕೆ ಚಂದ್ರಮೌಳೇಶ್ವರ ಮತ್ತು ಉಮಾಮಹೇಶ್ವರ ರಥೋತ್ಸವ ನಡೆಯಲಿದೆ.
ಫೆ.14 ರಂದು ಸಂಜೆ 4ಕ್ಕೆ ಸಿದ್ಧನಾಯಕ ವೃತ್ತದಲ್ಲಿ ಶ್ರೀ ಮದಕರಿ ಯುವಕ ಸಂಘದಿಂದ ಜಂಗೀ ಕುಸ್ತಿಯನ್ನು ಏರ್ಪಡಿಸಲಾಗಿದೆ.
ಫೆ.15ರಂದು ರಾತ್ರಿ 8ಕ್ಕೆ ಸುಮಂಗಲೆಯರಿಂದ ಕರ್ಪೂರದಾರತಿ, ಫೆ.16ರಂದು ರಾತ್ರಿ 8ಕ್ಕೆ ಚಿಟುಗ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ಉಯ್ಯಾಲೋತ್ಸವ, ವಸಂತೋತ್ಸವ, ಓಕಳಿ ಪಾರ್ವಟೋತ್ಸವ ನಡೆಯಲ್ಲಿದೆ. ಫೆ.17ರಂದು ಸಂಜೆ 4ಕ್ಕೆ ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವ ಮುಕ್ತಾಯಗೊಳ್ಳಲಿದೆ.
ಪ್ರಯಾಗ್ ರಾಜ್: 144 ವರ್ಷಗಳಿಗೊಮ್ಮೆ ಬರುವ ಮಹಾ ಕುಂಭಮೇಳವನ್ನು ಕಣ್ತುಂಬಿಕೊಳ್ಳುವುದಕ್ಕೆ ದೇಶದ ಜನ ಪ್ರಯಾಗ್ ರಾಜ್ ಗೆ ಭೇಟಿ ನೀಡುತ್ತಾ…
ಶಿವಮೊಗ್ಗ: ಅಡಿಕೆ ಬೆಳೆಯಿಂದ ಒಳ್ಳೆ ಲಾಭವೇನೋ ಬರುತ್ತೆ. ಆದರೆ ಅದನ್ನ ಯಾವುದೇ ರೋಗ ಬರದಂತೆ ಕಾಪಾಡುವುದೇ ದೊಡ್ಡ ಸವಾಲಿನ…
ಚಿತ್ರದುರ್ಗ. ಫೆ.04 : ಸವಿತಾ ಸಮಾಜ ಬಾಂಧವರು ಶ್ರಮ ಹಾಗೂ ಕಾಯಕ ಜೀವಿಗಳಾಗಿದ್ದಾರೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಸುಂದರವಾಗಿ ಕಾಣುತ್ತಿದ್ದಾರೆ…
ಹಿರಿಯೂರು: ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಿಂದ ರೈತರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಿ ಎಂದು ರೈತರ ಒತ್ತಾಯದ ಮೇರೆಗೆ ಸಚಿವ…
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 04 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 04 ) ಹತ್ತಿ ಮಾರುಕಟ್ಟೆ ಇದ್ದು,…
ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬಂದಾಗೆಲ್ಲ ಹಿಜಾಬ್ ಬಗ್ಗೆಯೇ ಬಹಳ ಚರ್ಚೆಯಾಗುತ್ತದೆ. ಹಿಜಾಬ್ ಬಗ್ಗೆ…