Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶ್ರೀರಾಮ್ ಪ್ಯಾಕರ್ಸ್ & ಮೂವರ್ಸ್‍ಗೆ ರೂ.1 ಲಕ್ಷ ದಂಡ : ಚಿತ್ರದುರ್ಗ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ  

---Advertisement---

 

ಚಿತ್ರದುರ್ಗ, ಆಗಸ್ಟ್.02: ಗೃಹೋಪಯೋಗಿ ವಸ್ತುಗಳು ಹಾಗೂ ಪೀಠೋಪಕರಣಗಳ ಸಾಗಾಣಿಕೆಗೆ ಗ್ರಾಹಕ ಓರ್ವರಿಂದ ರೂ.14,000 ಹಣ ಪಡೆದು ಸಾಗಾಣಿಕೆ ವೇಳೆ ನಿರ್ಲಕ್ಷ್ಯ ವಹಿಸಿ, ಬೆಲೆಬಾಳುವ ಪೀಠೋಪಕರಣ ಹಾಗೂ ಗೃಹೋಪಯೋಗಿ ವಸ್ತುಗಳು ಹಾನಿ ಮಾಡಿ, ಗ್ರಾಹಕರಿಗೆ ನಷ್ಟ ಪರಿಹಾರ ನೀಡಿದ ದಾವಣಗೆರೆ ಮೂಲದ ಶ್ರೀರಾಮ್ ಪ್ಯಾಕರ್ಸ್ ಆಂಡ್ ಮೂವರ್ಸ್ ಸಂಸ್ಥೆಗೆ ರೂ.1 ಲಕ್ಷ ದಂಡ ವಿಧಿಸಿ  ಚಿತ್ರದುರ್ಗ ಜಿಲ್ಲಾ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.

2024ರ ಅಕ್ಟೋಬರ್ 20ರಂದು ಗ್ರಾಹಕರ ಗೃಹೋಪಯೋಗಿ ವಸ್ತುಗಳನ್ನು ಚಿತ್ರದುರ್ಗದಿಂದ ದಾವಣಗೆರೆ ನಿವಾಸಕ್ಕೆ ಸಾಗಿಸುವ ವೇಳೆ ಶ್ರೀರಾಮ್ ಪ್ಯಾಕರ್ಸ್ ಆಂಡ್ ಮೂವರ್ಸ್ ಸಂಸ್ಥೆ ನಿರ್ಲಕ್ಷ ತೋರಿ ಪೀಠೋಪಕರಣಗಳಿಗೆ ಹಾನಿ ಉಂಟುಮಾಡಿತ್ತು. ಸಂಸ್ಥೆ ಉಂಟುಮಾಡಿದ ಸೇವಾ ನ್ಯೂನ್ಯತೆಗೆ ಪರಿಹಾರ ಕೋರಿ ನೊಂದ ಗ್ರಾಹಕರು 2025ರ ಏಪ್ರಿಲ್ 8 ರಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷೆ ಹೆಚ್.ಎನ್.ಮೀನಾ ಮತ್ತು ಸದಸ್ಯೆ ಬಿ.ಹೆಚ್.ಯಶೋಧ ಅವರು, ಶ್ರೀರಾಮ್ ಪ್ಯಾಕರ್ಸ್ ಆಂಡ್ ಮೂವರ್ಸ್ ಸಂಸ್ಥೆಗೆ 30 ದಿನಗಳ ಒಳಗಾಗಿ ರೂ.1 ಲಕ್ಷ ಪರಿಹಾರವನ್ನು ಶೇ.9 ರಷ್ಟು ಬಡ್ಡಿಯೊಂದಿಗೆ ಗ್ರಾಹಕರಿಗೆ ನೀಡಬೇಕು. ಸೇವಾ ನ್ಯೂನ್ಯತೆ ಮಾನಸಿಕ ಹಾಗೂ ದೈಹಿಕ ಹಿಂಸಿಗೆ ದಂಡರೂಪವಾಗಿ ರೂ.15,000 ಪಾವತಿಸುವಂತೆ ಆದೇಶಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment