Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದಗಂಗಾ‌ ಮಠಕ್ಕೆ‌ ನೀರಿನ ಸಮಸ್ಯೆಯ ಆತಂಕ ದೂರ : ಅಂತದ್ದೇನಾಗಿತ್ತು..?

---Advertisement---

ತುಮಕೂರು: ಜಿಲ್ಲೆಯ ಸಿದ್ದಗಂಗಾ ಮಠ‌ ಅಂದ್ರೆ ಇಡೀ ರಾಜ್ಯದಲ್ಲಿಯೇ ಹೆಸರುವಾಸಿ. ರಾಜ್ಯದ ಮೂಲೆ ಮೂಲೆಯಿಂದಾನೂ ಮಕ್ಕಳು ಇಲ್ಲಿಗೆ ಓದುವ ಸಲುವಾಗಿ ಬರ್ತಾರೆ. ಸಾವಿರಾರು ಮಕ್ಕಳು ಮಠದಲ್ಲಿದ್ದಾರೆ. ಹೀಗಿರುವಾಗ ಮಠಕ್ಕೆ ಬರುವ ನೀರಿಗೆ ಸಮಸ್ಯೆಯಾದರೆ ಎಷ್ಟು ಸಂಕಟವಾಗಬೇಡ. ಇದಕ್ಕೆಲ್ಲ ಕಾರಣವಾಗಿದ್ದಿದ್ದು, ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿ ಮಾಡದೆ ಇದ್ದದ್ದೆ ಕಾರಣ.

ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿ ಮಾಡದೆ ಇದ್ದ ಕಾರಣಕ್ಕೆ ಹೊನ್ನೇನಹಳ್ಳಿ ಕೆರೆಗೆ ದೇವರಾಯಪಟ್ಟಣದ ಕೆರೆಗೆ ನೀರು ಹರಿಸುವ ವ್ಯವಸ್ಥೆಯನ್ನು ವಿದ್ಯುತ್ ಇಲಾಖೆ ಸ್ಥಗಿತಗೊಳಿಸಿತ್ತು. ಇದು ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಎಚ್ಚೆತ್ತುಕೊಂಡ ಕೆಐಎಡಿಬಿ ಇದೀಗ 1.96 ಕೋಟಿ ಹಣವನ್ನ ಪಾವತಿ ಮಾಡಿದೆ. ಇದರಿಂದ ಮಠದ ನೀರಿನ ಸಮಸ್ಯೆಗೆ ಪರಿಹಾರವೂ ಸಿಕ್ಕಂತೆ ಆಗಿದೆ. ಕಳೆದ ವರ್ಷ ವಿದ್ಯುತ್ ವೆಚ್ಚ ಭರಿಸುವ ವಿಚಾರದಲ್ಲಿ ಗೊಂದಲ ಉಂಟಾಗಿತ್ತು. ಮಠವು ನೀರನ್ನು ಬಳಸದೇ ಇದ್ದರೂ ವಿದ್ಯುತ್ ಬಿಲ್ ಪಾವತಿಸುವಂತೆ ನೋಟಿಸ್ ನೀಡಲಾಗಿತ್ತು.

 

ಈ ವಿಷಯ ಗಮನಕ್ಕೆ ಬಂದ ನಂತರ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ದೀರ್ಘಕಾಲ ಬಿಲ್ ಪಾವತಿ ಆಗದ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಪ್ರತಿದಿನ ಸಾವಿರಾರು ಭಕ್ತರು ಹಾಗೂ ಸುಮಾರು ಸಾವಿರಾರು ವಿದ್ಯಾರ್ಥಿಗಳು ಮಠದ ಮೇಲೆ ಅವಲಂಬಿತರಾಗಿರುವುದರಿಂದ ನೀರಿನ ಕೊರತೆ ದೊಡ್ಡ ಸಮಸ್ಯೆಯಾಗಲಿದೆ ಎಂಬ ಆತಂಕ ವ್ಯಕ್ತವಾಗಿತ್ತು. ದೇವರಾಯಪಟ್ಟಣ ಕೆರೆಗೆ ಹಲವು ತಿಂಗಳಿನಿಂದ ನೀರು ಹರಿಯದ ಹಿನ್ನೆಲೆ ಸ್ಥಳೀಯ ರೈತರಲ್ಲಿಯೂ ಚಿಂತೆ ಹೆಚ್ಚಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now