ತುಮಕೂರು: ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಮಠದ ಸರ್ವಾಧ್ಯಕ್ಷ ಸಿದ್ಧಲಿಂಗಾ ಸ್ವಾಮಿಗಳು ಉತ್ತರಾಧಿಕಾರಿಯನ್ನು ನೇಮಕ ಮಾಡಿದ್ದು, ಶಿಕ್ಷಕ ವೃತ್ತಿಯಲ್ಲಿರುವವರನ್ನೇ ನೇಮಕ ಮಾಡಿದ್ದಾರೆ. ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರಯವ ಮನೋಜ್ ಕುಮಾರ್ ಅವರು ಮಠದ ಉತ್ತರಾಧಿಕಾರಿಯಾಗಿ ಮುಂದುವರೆಯಲಿದ್ದಾರೆ. ಮನೋಜ್ ಕುಮಾರ್ ಅವರು ಬಿಎಸ್ಸಿ, ಎಂಎಸ್ಸಿ, ಎಂಎ ವಿದ್ವತ್ ವಿಧ್ಯಾಭ್ಯಾಸ ಮಾಡಿದ್ದಾರೆ.
ಮನೋಜ್ ಕುಮಾರ್ ಅವರು ಮೂಲತಃ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಮೈಲನಹಳ್ಳಿಯವರು. ಷಡಕ್ಷರಿ ಹಾಗೂ ವಿರೂಪಾಕ್ಷಮ್ಮ ಅವರ ಪುತ್ರ. 1982ರಲ್ಲಿ ಜನಿಸಿದ್ದಾರೆ. ಇದೇ ತಿಂಗಳ 23ರಂದು ಅಂದ್ರೆ ಬಸವ ಜಯಂತಿ, ಅಕ್ಷಯ ತೃತೀಯ ದಿನದಂದು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗುತ್ತದೆ.
ಸಿದ್ಧಗಂಗಾ ಮಠದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮ ಮಾಡಲಾಗುತ್ತದೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ಮನೋಜ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗುತ್ತದೆ. ಸಿದ್ದಗಂಗಾ ಮಠದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ರಾಜ್ಯದ ಮೂಲೆ ಮೂಲೆಯಿಂದಾನು ಬಂದ ಮಕ್ಕಳು ಮಠದಲ್ಲಿ ವಿಧ್ಯಾಭ್ಯಾಸ ಕಲಿಯುತ್ತಿದ್ದಾರೆ. ಅನ್ನದಾಸೋಹದ ಜೊತೆಗೆ ಅಕ್ಷರ ದಾಸೋಹ ನಡೆಯುತ್ತಿದೆ. ಈಗ ಉತ್ತರಾಧಿಕಾರಿಯಾಗಿ ಒಬ್ಬರು ಶಿಕ್ಷಕರನ್ನೇ ನೇಮಕ ಮಾಡಿದ್ದು ಎಲ್ಲರ ಗಮನ ಸೆಳೆಯುತ್ತಿದೆ.