Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿಮ್ಮಕ್ಕನ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ : ಸಿದ್ದರಾಮಯ್ಯ ಘೋಷಣೆ

---Advertisement---

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಸಾಲು ಮರದ ತಿಮ್ಮಕ್ಕ ಈಚೆಗಷ್ಟೇ ನಿಧನರಾದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ಕೂಡ ನಡೆದಿತ್ತು. ಇದೀಗ ತಿಮ್ಮಕ್ಕರ ಹೆಸರಿನಲ್ಲಿ ಪ್ರತಿವರ್ಷ ಪ್ರಶಸ್ತಿಯನ್ನ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ ಹಣದ ಬಡ್ಡಿಯಲ್ಕು ಪ್ರತಿ ವರ್ಷವೂ ಕಾರ್ಯಕ್ರಮ ಆಯೋಜನೆ ಮಾಡಿ, ಕನಿಷ್ಠ 5 ಪರಿಸರವಾದಿಗಳಿಗೆ ಸಾಲುಮರದ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ನಾವೂ ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು, ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಚಾರವಾಗಿದೆ.

ನಮ್ಮ ರಾಜ್ಯ ವಾಸಿಸಲು ಯೋಗ್ಯವಾಗಿಸುವುಕ್ಕೆ, ಜನರೆಲ್ಲರೂ ಪರಿಸರದ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ಇತ್ತೇಚೆಗೆ ನಿಧನರಾದ ತಿಮ್ಮಕ್ಕನವರಹ ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು ಎಂದರು. ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದ್ದು,ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು ಎಂದು ಮನವಿ ಮಾಡಿದರು. ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...