ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 : ಮೂರು ಗಂಟೆ ಹದಿನೈದು ನಿಮಿಷಗಳ ಕಾಲ ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಐದು ನೂರು ಕೋಟಿ ರೂ.ಗಳನ್ನು ಘೋಷಿಸಿರುವುದು ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಜನರ ಕನಸಿಗೆ ಪೂರಕವಾಗಿದೆ. ಇದೊಂದು ಜನಪರ ಬಜೆಟ್ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮೋಕ್ಷರುದ್ರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

183 ಪುಟಗಳ ಬಜೆಟ್‍ನ್ನು ವಿಧಾನಸಭೆಯಲ್ಲಿ ಮಂಡಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಐದು ನೂರು ಕೋಟಿ ರೂ.ಗಳನ್ನು ಘೋಷಿಸಿ ಬಯಲುಸೀಮೆ ಜನರ ಆಶಯಗಳಿಗೆ ಸ್ಪಂದಿಸಿದ್ದಾರೆ. ಪ್ರತಿಪಕ್ಷಗಳ ಸಭಾತ್ಯಾಗದ ನಡುವೆಯೇ ಮೂರು ಲಕ್ಷ 71 ಸಾವಿರದ 383 ಕೋಟಿ ರೂ.ಗಳ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಾ ಜಾತಿ ಧರ್ಮದವರಿಗೆ ಪ್ರಾಧಾನ್ಯತೆ ನೀಡಿರುವ ಬಜೆಟ್ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಶ್ರೀಮತಿ ರೇಣುಕಶಿವು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















