ಶಾಪಗ್ರಸ್ಥ ಜಿಲ್ಲೆ ಎಂದೇ ಖ್ಯಾತಿ ಪಡೆದಿರೋ ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸಂಪುಟ ಸಭೆ..!

suddionenews
1 Min Read

ಚಾಮರಾಜನಗರ: ಮೂಢನಂಬಿಕೆಗಳಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕೊಂಚ ದೂರವೇ ಉಳಿದಿದ್ದಾರೆ. ಕಷ್ಟಪಟ್ಟು ಕೆಲಸ ಮಾಡಿದರೆ ಫಲ ಸಿಗಲಿದೆ ಎಂಬ ನಂಬಿಕೆ ಅವರದ್ದು. ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತಿದೆ. ಈ ಕಾತಣಕ್ಕಾಗಿಯೇ ಚಾಮರಾಜನಗರದತ್ತ ರಾಜಕಾರಣಿಗಳು ಅಷ್ಟಾಗಿ ಸುಳಿಯುವುದಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರು ಆ ರೀತಿ ಅಲ್ಲ. ಈಗಾಗಲೇ ಆ ಮೂಢನಂಬಿಕೆಗಳಿಗೆ ಸೆಡ್ಡು ಹೊಡೆದಿದ್ದಾರೆ. ಇದೀಗ ಶಾಪಗ್ರಸ್ಥ ಜಿಲ್ಲೆಯೆಂದೇ ಖ್ಯಾತಿ ಪಡೆದಿದೆ. ಇಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆಬ್ರವರಿ 15ರಂದು ಸಂಪುಟ ಸಭೆ ನಡೆಸಲಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ.

ನಗರ ಹಾಗೂ ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯ ಒದಗಿಸುವ ಕುರಿತು ಚರ್ಚೆ ನಡೆಸಿ, ಪರಿಹಾರ ನೀಡುವ ನಿರೀಕ್ಷೆ ಇದೆ. ಈ ಹಿಂದೆ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರದಲ್ಲಿ ಮಿನಿ ಸಂಪುಟ ಸಭೆ ನಡೆದಿತ್ತು.

Share This Article
Leave a Comment

Leave a Reply

Your email address will not be published. Required fields are marked *