Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿಢೀರ್ ಸಭೆ ಕರೆದ ಸಿದ್ದರಾಮಯ್ಯ: ಸಭೆ ಬಳಿಕ ಕಾವೇರಿ ಬಗ್ಗೆ ಹೇಳಿದ್ದೇನು..?

---Advertisement---

 

ಬೆಂಗಳೂರು: ಕರ್ನಾಟಕದ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದರೂ ವಾಸ್ತವ ಸ್ಥಿತಿಯನ್ನು ಕಾವೇರಿ ಪ್ರಾಧಿಕಾರ ಅರ್ಥ ಮಾಡಿಕೊಳ್ಳುವುದಕ್ಕೆ ಹೋಗುತ್ತಿಲ್ಲ. ಇದೀಗ ಮತ್ತೆ ನೀರು ಬಿಡಬೇಕೆಂಬ ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ, ಇಂದು ಕರ್ನಾಟಕ ಬಂದ್ ಕೂಡ ಮಾಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ದಿಢೀರನೇ ಸಭೆ ನಡೆಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್, ವಕೀಲರು, ತಜ್ಞರು, ಸಚಿವರು,‌ ನಿವೃತ್ತ ನ್ಯಾಯಾಧೀಶರು, ಅಡ್ವಕೇಟ್ ಜನರಲ್, ಹಿರಿಯ ವಕೀಲರು ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆದಿದೆ. ಇದಕ್ಕೆ ಎಲ್ಲರಿಗೂ ಧನ್ಯವಾದಗಳು. ಸಭೆಯಲ್ಲಿ ಕಾನೂನು ತಜ್ಞರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ಮುಖ್ಯವಾಗಿ ಸಲಹಾ ಸಮಿತಿ ರಚಿಸುವುದಕ್ಕೆ ಸಲಹೆ ನೀಡಲಾಗಿದೆ. ಮುಂದಿನ 18 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ಹರಿಸಿ ಎಂದು ಸೂಚನೆ ನೀಡಲಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್​ ಮೊರೆ ಹೋಗಲಿದ್ದೇವೆ. ಮೇಕೆದಾಟು ನಿರ್ಮಾಣ ಬಗ್ಗೆ ಕೋರ್ಟ್​ನಲ್ಲಿ ಪ್ರಸ್ತಾಪ ಮಾಡಲಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment