ಲೋಕಸಭಾ ಚುನಾವಣಾ ವಿಚಾರದಲ್ಲಿ ಮೋದಿಗೆ ಸವಾಲು ಹಾಕಿದ ಸಿದ್ದರಾಮಯ್ಯ

ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ.

ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ ಪ್ರಧಾನಿ @narendramodi ಅವರೇ.

ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರ್ಕಾರ ಅಂದಾಜು 1.25 ಲಕ್ಷ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ ಪ್ರಧಾನಿ @narendramodi ಅವರೇ?

ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ?

ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ ಪ್ರಧಾನಿ @narendramodi‌ಅವರೇ?

ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ ಪ್ರಧಾನಿ @narendramodi ಅವರೇ?

ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ @BJP4Karnataka ಭರವಸೆ ನೀಡಿತ್ತು.
ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ?

ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ @BJP4Karnataka ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ.
ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ @BSYBJP ಅವರು ಗುಡುಗುತ್ತಲೇ ಇದ್ದಾರೆ.
ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಪ್ರಧಾನಿ @narendramodi ಅವರೇ? #AnswerMadiModi ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *